ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
Free health check-up for civic workers
ರನ್ನ ಬೆಳಗಲಿ ಸೆ.23: ಪಟ್ಟಣದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಬುಧವಾರ ನಡೆಯಿತು.ಪೌರಾಡಳಿತ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ಚನ್ನಬಸಪ್ಪ ದೇವರಡ್ಡಿ ಹಾಗೂ ರಮೇಶ ಅರಿಕೇರಿ ಅವರು ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಕುರಿತು ಅಗತ್ಯ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ, ಉಪಾಧ್ಯಕ್ಷೆ ಸಹನಾ ಸಾಂಗ್ಲಿಕರ, ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಸ್ಥಾಯಿ ಸಮಿತಿ ಛೇರ್ಮನ್ ಪ್ರವೀಣ ಬರಮನಿ,ಆರ್‌ಐ ಬಾಬು ಜಕಾತಿ, ಮಹಾಲಿಂಗಪ್ಪ ಸಮೇರ, ಸ್ಥಳೀಯ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಶಿವಾನಂದ ಬಾವಿಮನಿ, ಮೇಲ್ವಿಚಾರಕ ಸತ್ಯಪ್ಪ ಹನಗಂಡಿ, ಸೇರಿದಂತೆ ಪಪಂ ಸದಸ್ಯರು, ಪೌರಕಾರ್ಮಿಕರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 