ರಾಣೆಬೆನ್ನೂರ

ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ

ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ

ರಾಣೇಬೆನ್ನೂರು 26: ಸಮಾಜದಲ್ಲಿ ಪರೋಪಕಾರ ಮಾಡುವರು ತಮಗೆ ಅರಿವಿಲ್ಲದಂತೆ ಭಗವಂತನಿಗೆ ಪ್ರಿಯವಾಗಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಪರೋಪಕಾರ ಮನೋಭಾವನೆ ಜೀವನದಲ್ಲಿ ರೂಡಿಸಿಕೊಳ್ಳಬೇಕು. ಆಗ ಮಾತ್ರ ಸಮಾಜ ಅಭಿವೃದ್ದಿ ಹೊಂದಲು ಸಾಧ್ಯ ಎಂದು ಹುಬ್ಬಳ್ಳಿ ನೀಲಕಂಠೇಶ್ವರ ಮಠದ ಶ್ರೀಶೈಲಂ ಆದೀಪೀಠ ಸೂರ್ಯ ಸಿಂಹಾಸನಾದೀಶ್ವರ ಜಗದ್ಗುರು ಶಿವಶಂಕರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.ಅವರು ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಆವರಣದ ಗಣೇಶ ಮಂಟಪದಲ್ಲಿ  ಕುರುಹಿನ ಶೆಟ್ಟಿ ಸೇವಾ ಸಮಾಜ, ಕಾಕಿ ಜನಸೇವಾ ಸಂಸ್ಥೆ, ಜೇಸಿಐ ಸಂಸ್ಥೆ ಹಾಗೂ ಜೇಸಿಸ್ ಕ್ಷೇಮಾಭಿವೃದ್ಧಿ ಕ್ರೆಡಿಟ್ ಕೋ-ಅಪ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ನೀಲಕಂಠೇಶ್ವರ ದೇವಸ್ಥಾನದ ಕಾರ್ತಿಕೋತ್ಸವದ ಪ್ರಯುಕ್ತ ಏರಿ​‍್ಡಸಲಾಗಿದ್ದ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ, ಪರಸ್ಪರ ಪ್ರೀತಿ ವಿಶ್ವಾಸದಿಂದ ಜೀವನ ಸಾಗಿಸಬೇಕು.  

ಅಂದಾಗ ಮಾತ್ರ ಜೀವನ ಎಂಬ ಜಂಜಾಟದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ನವ ದಂಪತಿಗಳು ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ಸಂಸ್ಕಾರವಂತರನ್ನಾಗಿಸಬೇಕು  ಎಂದರು.ಸಮಾಜದಲ್ಲಿ ಸಾಮೂಹಿಕ ವಿವಾಹ ನಡೆಸುವುದರಿಂದ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ದುಂದು ವೆಚ್ಚದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದರಿಂದ ಬಡ ಹಾಗೂ ಮಧ್ಯ ವರ್ಗದ ಕುಟುಂಬಸ್ಥರು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರ ಆರ್ಥಿಕ ಮಟ್ಟ ಸುಧಾರಣೆಗೆ ಇಂತಹ ಸಾಮೂಹಿಕ ವಿವಾಹಗಳು ಸಹಾಯಕಾರಿಯಾಗಿವೆ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮದ ವಧು-ವರರ ವಿವಾಹ ಆಯೋಜನೆ ಮಾಡಿರುವ ಕಾಕಿ ಜನಸೇವಾ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಿಂದ ಬಡವರ ಆರ್ಥಿಕ ಹೊರೆಯನ್ನು ತಗ್ಗಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸರಳ ವಿವಾಹಗಳಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ. ಬಡವರ ಅನುಕೂಲತೆಗೆ ಪ್ರತಿವರ್ಷ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುವ ಕಾಕಿ ಕುಟುಂಬ ಹಾಗೂ ಕುರುಹಿನಶೆಟ್ಟಿ ಸೇವಾ ಸಮಿತಿ ಕಾರ್ಯ ಮೆಚ್ಚುವಂತಹದ್ದಾಗಿದೆ. ಹೊಸ ಜೋಡಿಗಳು ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಜೀವನ ಸಾಗಿಸಬೇಕು. ಅಂದಾಗ ಮಾತ್ರ ಇಂತಹ ಕಾರ್ಯಕ್ರಮದ ಫಲ ಸಿಕ್ಕಂತಾಗುತ್ತದೆ ಎಂದರು.ಶನೈಶ್ಚರ ಹಿರೇಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ ಮಾತನಾಡಿದರು.ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಅಧ್ಯಕ್ಷತೆ ವಹಿಸಿದ್ದರು.ಇದೇ ಸಂದರ್ಭದಲ್ಲಿ ಹತ್ತು ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  

ಇನ್ನೂ ಕಾಕಿ ಜನಸೇವಾ ಸಂಸ್ಥೆಯ ಎರಡು ಸದಸ್ಯರಿಗೆ ಲಕ್ಕಿ ಡ್ರಾ ಮೂಲಕ ನಿವೇಶನ ನೀಡಲಾಯಿತು.ನಗರಸಭೆ ಸದಸ್ಯ ಪ್ರಕಾಶ ಪೂಜಾರ, ಕುರುಹಿನಶೆಟ್ಟಿ ಸಮಾಜ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಉಪಾಧ್ಯಕ್ಷ ಶಿವಾನಂದ ಸಾಲಗೇರಿ, ಕಾರ್ಯದರ್ಶಿ ಮಂಜುನಾಥ ಹೊಸಪೇಟೆ, ಖಜಾಂಚಿ ಹನುಮಂತಪ್ಪ ಕಾಕಿ, ಸದಸ್ಯರಾದ ಸಣ್ಣ ಹನುಮಂತಪ್ಪ ಕಾಕಿ, ರೂಪಾ ಕಾಕಿ, ಶೋಭಾ ಹೊಸಪೇಟೆ, ಕುಮಾರ ಶ್ಯಾವಿ, ಸಿದ್ದಪ್ಪ ಬೂದೂರ, ಶ್ರೀಧರ ಅಮಾಸಿ, ಗುಡದಯ್ಯ ಹಲಗೇರಿ, ವೆಂಕಟೇಶ ಕಾಕಿ, ಜೆಸಿಐ ಘಟಕದ ಅಧ್ಯಕ್ಷೆ ಲಕ್ಷ್ಮಿ ಅಡಕಿ, ಮುಖಂಡರಾದ ಪ್ರಕಾಶ ಗಚ್ಚಿನಮಠ, ಆರಿ​‍್ಬ.ಪಾಟೀಲ, ನಾಗರಾಜ ಹೊಸಪೇಟೆ, ಲಿಂಗರಾಜ ಬೂದನೂರು, ಶಿವಾನಂದ ಬಗಾದಿ, ಕೋಟ್ರೇಶಪ್ಪ ಎಮ್ಮಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. 


ಸುದ್ದಿ ಓದಿ