ರಾಣೆಬೆನ್ನೂರ

29ರಂದು ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ

29ರಂದು ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ

ರಾಣಿಬೆನ್ನೂರು 24:  ತಾಲೂಕಿನ ಸುಕ್ಷೇತ್ರ ಖಂಡೇರಾಯನಹಳ್ಳಿ  ಸಿದ್ಧಾರೂಢ ಮಠದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿಯವರ ಜಯಂತಿ ಅಂಗವಾಗಿ ನಡೆಸುವ 30ನೇಯ ವೇದಾಂತ ಪರಿಷತ್, ಇಂಚಲದ ಸಾದು ಸಂಸ್ಥಾನ ಮಠದ ಸದ್ಗುರು ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗಳವರ 84ನೇಯ ಜಯಂತೋತ್ಸವ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹವು ಮೇ.29 ರಂದು ಬೆಳಗ್ಗೆ 9.30 ಗಂಟೆಗೆ ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಶ್ರೀಗಳವರ ಸದಿಚ್ಚೆಯ ಮೇರಗೆ ಜರುಗಲಿವೆ. 

ಅಂದು ಬ್ರಾಹ್ಮಿಮೂಹೂರ್ತದಲ್ಲಿ ಸಿದ್ಧಾರೂಢರ ಪಂಚಲೋಹದ ಮೂರ್ತಿಗೆ ಪಂಚಾಮೃತ ಅಭಿಷೇಕ ಮಹಾಪೂಜೆ, ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. 9.15 ಕ್ಕೆ ಡಾ. ಶಿವಾನಂದ ಭಾರತಿ ಮಹಾಸ್ವಾಮೀಜಿಗಳವರ ಅಮೃತ ಹಸ್ತದಿಂದ ಪ್ರಣವ ಧ್ವಜಾರೋಹಣ ನೆರವೇರಲಿದೆ. 

ಇದೇ ಸಂದರ್ಭದಲ್ಲಿ ಡಾ. ಶಿವಾನಂದ ಭಾರತಿ ಮಹಾಸ್ವಾಮೀಜಿಗಳವರ 84ನೇ ವರ್ಷದ ಜಯಂತಿ ಅಂಗವಾಗಿ ನ್ಯಾಯವಾದಿ ಎಂ.ಬಿ. ಚಿನ್ನಪ್ಪನವರಿಂದ ಶ್ರೀಗಳವರ ಸನ್ಮಾನ ಮತ್ತು ದಾವಣಗೇರಿ ಬಾಪುಜಿ ಮೆಡಿಕಲ ಕಾಲೇಜ ಪ್ರೊ. ಡಾ. ಎಂ. ಸುನಿತಾ ಮತ್ತು ಕುಟುಂಬದವರಿಂದ ಶ್ರೀಗಳವರ ತುಲಾಬಾರ ನೆರವೇರುವುದು. ನಂತರ ಸಾಮೂಹಿಕ ವಿವಾಹ ನಡೆಯಲಿದೆ.  

ಅನಂತರ ವೇದಾಂತ ಧರ್ಮಸಭೆಯ ದಿವ್ಯ ಸಾನಿಧ್ಯವನ್ನು ಇಂಚಲ ಶಿವಯೋಗಿಶ್ವರ ಸಾಧು ಸಂಸ್ಥಾನಮಠದ ಡಾ. ಶಿವಾನಂದ ಭಾರತಿ ಶ್ರೀಗಳು, ಸಾನಿಧ್ಯವನ್ನು ಐರಣಿ ಹೊಳೆಮಠದ ಬಸವರಾಜ ದೇಶಿಕೇಂದ್ರ ಸ್ವಾಮಿಜಿ, ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಸ್ವಾಮಿಜಿ, ನೇತೃತ್ವವನ್ನ ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಮಹಾಸ್ವಾಮಿಜಿಗಳು, ಅಧ್ಯಕ್ಷತೆ ದಾವಣಗೆರೆ ಜಡೆಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ, ಉಪಸ್ಥಿತಿ ಇಂಚಲದ ಪ್ರರ್ಣಾನಂದ ಭಾರತಿ ಶ್ರೀಗಳು, ಹದಡಿಯ ಚಂದ್ರಗಿರಿ ಮಠದ ಮುರಳೀಧರ ಶ್ರೀಗಳು, ನಗರದ ವಿರಕ್ತಮಠದ ಗುರುಬಸವ ಶ್ರೀಗಳು, ಹುಬ್ಬಳ್ಳಿಯ ಸಚ್ಚಿದಾನಂದ ಶ್ರೀಗಳು, ಮಣಕೂರ ಸಿದ್ಧಾರೂಢ ಗುರುದೇವಾಶ್ರಮದ ಮಾತಾಜಿ ಚನ್ನಬಸಮ್ಮನವರು, ಗೋಕಾಕ ತಾಲೂಕ ಹಡಗಿನಾಳದ ಸುಜ್ಞಾನ ಕುಟೀರದ ಮಲ್ಲೇಶ್ವರ ಶರಣರು ಉಪದೇಶಾಮೃತ ನೀಡುವರು. 

ವಿಧಾನಸಭಾ ಉಪಾಧ್ಯಕ್ಷ ರುದ್ರ​‍್ಪ ಲಮಾಣಿ, ಶಾಸಕರಾದ ಪ್ರಕಾಶ ಕೋಳಿವಾಡ, ಬಿ.ಪಿ. ಹರೀಶ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ಎಚ್‌.ಎಸ್‌. ಶಿವಶಂಕರ, ಗ್ರಾಪಂ ಅಧ್ಯಕ್ಷೆ ಲಲಿತಾ ಹಿರೇಬಿದರಿ, ಉಪಾಧ್ಯಕ್ಷೆ ನೀಲಮ್ಮ ಪೂಜಾರ ಆಗಮಿಸುವರು ಎಂದು ಶ್ರೀಮಠದ ಅಧ್ಯಕ್ಷ ಫಕ್ಕೀರ​‍್ಪಗೌಡ್ರ ಹಾಗೂ ಜನಾರ್ಧನ ಕಡೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ