ಮಕ್ಕಳಿಗೆ ಉಚಿತ ಶಾಲಾ ಸಾಮಾಗ್ರಿ ವಿತರಣೆ
Free school supplies distribution to children
ಕಂಪ್ಲಿ 02: ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿಯಲ್ಲಿರುವ ಬೃಹತ್ ಕಟೌಟ್ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ನೇತೃತ್ವದಲ್ಲಿ ಜನಪ್ರಿಯ ನಾಯಕ, ಅಭಿವೃದ್ಧಿಯ ಹರಿಕಾರ ಶಾಸಕ ಜೆ.ಎನ್.ಗಣೇಶ ಸಮ್ಮುಖದಲ್ಲಿ ಅವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ಜತೆಗೆ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಾಗ್ರಿಗಳನ್ನು ಸೋಮವಾರ ವಿತರಿದಲಾಯಿತು.
ಜೂನ್ 5ರಂದು ಶಾಸಕ ಗಣೇಶ ಅವರ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಕೇಕ್ ಕತ್ತರಿಸಿ, ವಿಶ್ವಗುರು ಬಸವಣ್ಣನ ನೆನಪಿನ ಕಾಣಿಕೆ ನೀಡುವ ಮೂಲಕ ಸಂಭ್ರಮದಿಂದ ಜನ್ಮದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯರಾದ ಸಿ.ಆರ್.ಹನುಮಂತ, ಮೌಲಾ, ವೀರಾಂಜಿನೇಯ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಬಿ.ನಾರಾಯಣಪ್ಪ, ಹೊನ್ನಳ್ಳಿ, ಗಂಗಾಧರ, ಮೆಟ್ರಿ ರಾಜ, ಬಳೆ ಮಲ್ಲಿಕಾರ್ಜುನ, ಜಿ.ಮರೇಗೌಡ, ಜಾಫರ್, ರಮೇಶ ನಾಯಕ, ಕಾಳಿಂಗ ವರ್ಧನ, ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 