ಪ್ರತಿಯೊಬ್ಬ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲು ಬದ್ಧ: ಶಾಸಕ ಗಣೇಶ

ಪ್ರತಿಯೊಬ್ಬ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲು ಬದ್ಧ: ಶಾಸಕ ಗಣೇಶ
ಲೋಕದರ್ಶನ ವರದಿ ಪ್ರತಿಯೊಬ್ಬ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲು ಬದ್ಧ: ಶಾಸಕ ಗಣೇಶ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪದವಿ ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಅನ್ನಪೂರ್ಣೇಶ್ವರಿ ಪೌಂಡೇಶನ ಮೂಲಕ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬ ಶಿಕ್ಷಕರು ಲಸಿಕೆ ಪಡೆದುಕೊಂಡು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಶಿಕ್ಷಕರಿಗೆ ಉಚಿತ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರವು ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವುದರಿಂದ ಇಲ್ಲಿಯ ಜನರು ಲಸಿಕೆ ಪಡೆದುಕೊಳ್ಳುವುದು ಅವಶ್ಯಕವಾಗಿದೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಇಲ್ಲಿಯವರಿಗೆ 62 ಸಾವಿರ ಜನರು ಲಸಿಕೆ ಪಡೆದುಕೊಂಡಿದ್ದಾರೆ. ಈಗ ಶಿಕ್ಷಕರಿಗೆ ಲಸಿಕೆ ಕೊಡಿಸಲು ನಿರ್ಧರಿಸಲಾಗಿದೆ ಎಂದರು. ಕೆಎಲ್‍ಇ ಕಾರ‍್ಯಾಧ್ಯಕ್ಷ ಡಾ, ಪ್ರಭಾಕರ ಕೋರೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಅನ್ನಪೂರ್ಣೇಶ್ವರಿ ಪೌಂಡೇಶನ ಮೂಲಕ ಕೆಎಲ್‍ಇ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಿದ್ದರಿಂದ ಲೋಕಸಭೆ ಕ್ಷೇತ್ರದ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲು ಅಭಿಯಾನ ನಡೆಸಲಾಗಿದೆ. ಮೊದಲ ದಿನ 60 ಜನ ಶಿಕ್ಷಕರು ಮತ್ತು ಸಿಬ್ಬಂದಿಗಳು ಲಸಿಕೆ ಪಡೆಯಲು ಆಗಮಿಸಿದ್ದಾರೆ ಎಂದರು. ಜುಲೈ 19 ಮತ್ತು 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸರಕಾರ ನಿಗದಿ ಮಾಡಿರುವುದರಿಂದ ಪ್ರತಿಯೊಬ್ಬ ಶಿಕ್ಷಕರು ಲಸಿಕೆ ಪಡೆದುಕೊಳ್ಳಬೇಕೆಂದು ಸರ್ಕಾರ ಆದೇಶ ಮಾಡಿದೆ. ಹೀಗಾಗಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲಾಗುತ್ತದೆ. ಎಲ್ಲ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳ ಶಿಕ್ಷಕರು ಹಾಗೂ ಸಿಬ್ಬಂಧಿ ವರ್ಗದವರಿಗೆ ಕೆಎಲ್‍ಇ ಅಸ್ಪತ್ರೆ, ಚಿಕ್ಕೋಡಿ ಇಲ್ಲಿ 1ನೇ ಡೋಸ ಹಾಗೂ 2ನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕು ಎಂದರು. ಸರ್ಕಾರ ಉಚಿತ ಲಸಿಕೆ ನೀಡುತ್ತಿದೆ. ನಿವೇಕೆ ಹಣ ಕೊಟ್ಟು ಖರೀದಿ ಮಾಡುತ್ತಿದ್ದಿರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಕೊರೊನಾ ನಿಯಂತ್ರಿಸುವುದು ಜನಪ್ರತಿನಿಧಿ ಕರ್ತವ್ಯ ಇದೆ. ಕ್ಷೇತ್ರದ ಜನ ನಮ್ಮ ಕುಟುಂಬದ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದರು. ಶಾಲಾ-ಕಾಲೇಜು ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕೆಂದು ಸರ್ಕಾರದ ಆದೇಶ ಹೊರಡಿಸಿದೆ. ಈ ದಿಸೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರು ಅನ್ನಪೂಣೇಶ್ವರಿ ಫೌಂಡೇಶನ ಮೂಲಕ ಶಿಕ್ಷಕರಿಗೆ ಉಚಿತ ಲಸಿಕೆ ನೀಡಲು ಮುಂದೆ ಬಂದಿರುವ ಕಾರ್ಯ ಶ್ಲಾಘನೀಯ ಎಂದು ಉಪನ್ಯಾಸಕ ಯುವರಾಜ ಚವ್ಹಾಣ ಹೇಳಿದರು.

ಸುದ್ದಿ ಓದಿ