ಶಿಗ್ಗಾವ್

ಸ್ವಾತಂತ್ರ್ಯ ಸಂಗ್ರಾಮ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮ

ಸ್ವಾತಂತ್ರ್ಯ ಸಂಗ್ರಾಮ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮ

ಶಿಗ್ಗಾವಿ 09: ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಿಟ್ಟು ನವ ಪೀಳಿಗೆಗೆ ಪ್ರೇರಕ ಶಕ್ತಿಯಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಬದುಕು ಆದರ್ಶನೀಯವಾಗಿದೆ ಎಂದು ಗಂಗೇಭಾವಿಯ ಸಿ.ಬಿ. ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಶಶಿಧರ ಯಲಿಗಾರ ಅಭಿಪ್ರಾಯಪಟ್ಟರು. 

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಾವೇರಿ ವೀರರ ಸ್ವಾತಂತ್ರ್ಯ ಸಂಗ್ರಾಮ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ತಗತವಾಗಿದ್ದ ದೇಶ ಪ್ರೇಮ ರೂಢಿಸಿಕೊಂಡು ಬ್ರಿಟಿಷರ ವಿರುದ್ಧ ಹೋರಾಡಿದ ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿ ಸುವುದು ನಮ್ಮಲ್ಲರ ಹೊಣೆ. ಭಾರತ ಸ್ವಾತಂತ್ರ್ಯ ಹೋರಾಟದ ಅಮೃತ ಮಹೋತ್ಸವ ಸಂದರ್ಭದಲ್ಲಿ ನಿರ್ಮಾಣವಾಗಿರುವ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ಸಿ ನಡೆಗೆ ಸಾಗಲಿ ಎಂದು ಹಾರೈಸಿದರು. 

ಸಾಕ್ಷ್ಯಚಿತ್ರ ನಿರ್ದೇಶಕ ಗೂಳಪ್ಪ ಅರಳಿಕಟ್ಟಿ ಮಾತನಾಡಿ, ನಮ್ಮ ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಬದುಕು ಹಾಗೂ ಬವಣೆ ಪರಿಚಯಿಸುವ ಸಾಕ್ಷ್ಯಚಿತ್ರವನ್ನು ಯುವಜನತೆ ಪ್ರಶಂಸಿಸುತ್ತಿರುವುದು ಹರ್ಷ ತಂದಿದೆ ಎಂದರು. 

ಪ್ರಾ.ಎಲ್‌.ಎ.ಹಿರೇಮಠ ಸ್ವಾಗತಿಸಿದರು. ಡಾ.ಭೂಷಣ ಬುಜಂಗ ವಂದಿಸಿದರು. 


ಸುದ್ದಿ ಓದಿ