ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ‘ಕಪ್ಪೆ ಸಾಂಬರ್’
Frog sambar' in government school hot meals
ಇಂದೋರ್: ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಮೊಟ್ಟೆ, ಚಿಕನ್ ಸೇರಿದಂತೆ ಮಾಂಸಾಹಾರ ಅಡುಗೆಯನ್ನು ಸೇರಿಸಬೇಕು ಎನ್ನುವ ಅಭಿಪ್ರಾಯವು ಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ, ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರ ಬಿಸಿಯೂಟದಲ್ಲಿ ಕಪ್ಪೆ ಸಾಂಬರ್ ಮಾಡಲಾಗಿದೆ.
ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಕೆಯ ವೇಳೆ ಅಡುಗೆಯವರ ಅಜಾಗರೂಕತೆಯಿಂದ ಸಾಂಬರ್ನಲ್ಲಿ ಕಪ್ಪೆ ಬಿದ್ದಿದೆ. ಸಾಂಬರ್ ಪಾತ್ರೆಯೊಳಗೆ ಸತ್ತ ಕಪ್ಪೆಯು ತೇಲುತ್ತಿರುವ ವಿಡಿಯೊ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಜಾಲತಾಣ ಖಾತೆಯಲ್ಲಿ ಕೂಡ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.
ಬಿಜೆಪಿ ನಾಯಕರು ಮತ್ತು ಸಚಿವರು ತಮ್ಮ ಮಕ್ಕಳಿಗೆ ಕಪ್ಪೆ ಸಾಂಬರ್ ತಿನ್ನಿಸುತ್ತಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ತಮ್ಮ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವ ಬಿಜೆಪಿ ನಾಯಕರು, ಬಡವರ ಮಕ್ಕಳಿಗೆ ಮಾತ್ರ ಕಪ್ಪೆ ಸಾಂಬರ್ ನೀಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದೆ.
ಕಪ್ಪೆ ಸಾಂಬರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 