ಕೃಷಿ ಸಖಿಯರಿಂದ-ಕೃಷಿಕರ ಆದಾಯ ಹೆಚ್ಚಳ- ಡಾ. ಮಂಜುನಾಥ ಚೌರಡ್ಡಿ ಅಭಿಮತ

ಕೃಷಿ ಸಖಿಯರಿಂದ-ಕೃಷಿಕರ ಆದಾಯ ಹೆಚ್ಚಳ- ಡಾ. ಮಂಜುನಾಥ ಚೌರಡ್ಡಿ ಅಭಿಮತ From Krishi Sakhi - Increase in farmers' income - Dr. Manjunath Chauraddi's opinion

ಲೋಕದರ್ಶನ ವರದಿ 

ನೇಸರಗಿ 01 : ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ, ಬೆಳಗಾವಿ ಮತ್ತು ಐಸಿಎಆರ್‌-ಕೆಎಲ್‌ಇ ಕೃಷಿ ವಿಜ್ಞಾನಕೇಂದ್ರ, ಮತ್ತಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ ಪರಿಸರ ಕೃಷಿ ವಿಧಾನಗಳ ಕುರಿತುಆರು ದಿನಗಳ ಮಾಡ್ಯುಲ್ ನಾಲ್ಕರ ತರಬೇತಿ ಕಾರ್ಯಕ್ರಮವನ್ನು ಮತ್ತಿಕೊಪ್ಪದ ಕೃಷಿ ವಿಜ್ಞಾನಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.   

ಇದರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥಡಾ. ಮಂಜುನಾಥ ಚೌರಡ್ಡಿಯವರು ಮಾತನಾಡಿ, ಕೃಷಿ ಸಖಿ ಎಂದರೆ ವ್ಯವಸಾಯದಲ್ಲಿ ರೈತರಿಗೆ ಸಹಕಾರ ನೀಡಿಕೃಷಿಯನ್ನು ಲಾಭದಾಯಕವಾಗಿ ನಡೆಯುವಂತೆ ಮಾರ್ಗದರ್ಶನ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಮಹಿಳೆಯರಿಗೆ ಕೃಷಿ ಸಖಿಯರು ಎನ್ನಬಹುದು.  ಕೃಷಿ ಸಖಿಯು ಕರ್ನಾಟಕ ಸರ್ಕಾರದ ಪ್ರತಿಪ್ಠಿತ ಸಂಜೀವಿನಿ-ಕರ್ನಾಟಕ ರಾಜ್ಯಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪರಿಕಲ್ಪನೆಯಾಗಿದೆ.

ಕೃಷಿಯನ್ನು ಲಾಭದಾಯಕವಾಗಿ ಮಾಡಲು ಹಾಗೂ ರೈತನ ಆದಾಯವನ್ನು ಹೆಚ್ಚಿಸಲು ರೈತರಿಗೆ ತಂತ್ರಜ್ಞಾನದ ಮಾರ್ಗದರ್ಶನ ಮಾಡುವುದು ಅವಶ್ಯಕವಾಗಿದೆ. ಸಂಸ್ಥೆಯುರೈತರ ಆಶೋತ್ತರಗಳಿಗೆ ಸ್ಪಂದಿಸಿ ಕೃಷಿ ತಂತ್ರಜ್ಞಾನದ ವಿಸ್ತರಣೆಯ ಮೂಲಕ ಉತ್ತಮ ಸೇವೆಯನ್ನು ಸಲ್ಲಿಸುತ್ತಿದೆ.  ಅಲ್ಲದೆ ಹತ್ತನೆತರಗತಿ ನಂತರ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ಸ್ವಂತಉದ್ಯೋಗ ಕೈಗೊಳ್ಳಲು ಕೃಷಿ ಡಿಪ್ಲೋಮಾ ಕೋರ್ಸ್‌ ಮೂಲಕ ತರಬೇತಿ ನೀಡಲಾಗುತ್ತಿದೆ.  ಕೃಷಿ ಸಖಿಯರು ರೈತರ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕಸಾಧಿಸಿ ರೈತರಿಗೆ ಸೇವೆ ಒದಗಿಸಬೇಕೆಂದು ಕರೆ ನೀಡಿದರು.  ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು.  

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್‌. ಎಮ್‌. ವಾರದ ಮಾತನಾಡಿ, ಕೃಷಿ ಸಖಿಯರು ರೈತರು ಮತ್ತು ಕೃಷಿ ವಿಜ್ಞಾನಕೇಂದ್ರ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುವರು. ಈ ನಿಟ್ಟಿನಲ್ಲಿ ಅವರ ತಾಂತ್ರಿಕ ಸಾಮರ್ಥ್ಯವನ್ನು ಬಲಪಡಿಸಲು ತರಬೇತಿ ನಡೆಸಲಾಗುತ್ತಿದೆ.  ಕೇಂದ್ರದ ವಿಜ್ಞಾನಿಗಳು ಹಾಗೂ ಕೃಷಿ/ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕೃಷಿ ಉತ್ಪಾದನೆ ಮತ್ತುರೈತರ ಆದಾಯವನ್ನು ಹೆಚ್ಚಿಸಲು ಪೂರಕವಾದ ತಂತ್ರಜ್ಞಾನಗಳನ್ನು ಮನವರಿಕೆ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕೇಂದ್ರದ ಗೃಹ ವಿಜ್ಞಾನಿ ಡಾ. ಭಾವಿನಿ ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೃಷಿ ಸಖಿಯರು ಸ್ವಾಗತಿಸಿ ನಿರೂಪಿಸಿದರು.