ವಿವಿಧ ಕನ್ನಡ ಪರ ಸಂಘಟನೆಗಳಿಂದ ಕನ್ನಡ ನಾಮಫಲಕಗಳ ಅಳವಡಿಸಲು ಕ್ರಮಕ್ಕೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 25: ಪಟ್ಟಣದ ನಾನಾ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಿರುವ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ, ಕನ್ನಡ ನಾಮಫಲಕಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೆಲ ಸರ್ಕಾರಿ ಕಚೇರಿ, ಬ್ಯಾಂಕ್ಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿಲ್ಲ. ಜಾಗತೀಕರಣದ ಪ್ರಭಾವದಿಂದ ನೆಲದ ಭಾಷೆ ಹಿಂದೆ ಸರಿದು ಅನ್ಯ ಭಾಷೆ ಮುನ್ನೆಲೆಗೆ ಬಂದಿದೆ. ಹೀಗಾಗಿ ಎಲ್ಲರಿಗೂ ಕನ್ನಡ ಭಾಷೆ ಮಹತ್ವ ತಿಳುಸುವುದೇ ನಮ್ಮ ಗುರಿ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಭಾಷೆ ವ್ಯವಹರಿಸುವುದು ಪ್ರತಿಯೊಬ್ಬ ಅಧಿಕಾರಿ ಕರ್ತವ್ಯವಾಗಬೇಕಿದೆ ಎಂದರು.
ಅರ್ಬಾಜ್ ಮುಲ್ಲಾ, ನಾಗರಾಜ ಸಂಗೊಳ್ಳಿ, ರುದ್ರಪ್ಪ, ಯೂಸುಫ್ ಶಿಗೀಹಳ್ಳಿ, ಸಲೀಂ ಜಮೀನ್ದಾರ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಇದ್ದರು