ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ
Full support for Panchmasali reservation struggle: Vijayendra
ವರದಿ ಈರಣ್ಣಾ ಹುಲ್ಲೂರ
ಬೆಳಗಾವಿ 09: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಭಾ.ಜ.ಪಾ ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಪಾಟೀಲ ಪಕ್ಷದ ಎಲ್ಲ ಮುಖಂಡರು ಇದ್ದರು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸ್ವಾಮೀಜಿಗಳಲ್ಲಿ ಮತ್ತೊಂದು ಮನವಿ ಮಾಡಿದ್ದೇನೆ. ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ ಸನ್ಮಾನ್ಯ ಯಡಿಯೂರ್ಪನವರು ಮುಖ್ಯಮಂತ್ರಿಗಳಿದ್ದಾಗ, ಪಂಚಮಸಾಲಿ ಸಮಾಜಕ್ಕೆ 3 ಬಿ ಕೊಡಲಾಗಿತ್ತು. 3 ಬಿ ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 ಎ ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ; ಯಡಿಯೂರ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು- ಇವ್ಯಾವುದು ಕೂಡ ಸರಿಯಲ್ಲ; ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದರು. ಈ ತಪ್ಪು ಅಭಿಪ್ರಾಯಕ್ಕೆ ಅವಕಾಶ ಕೊಡಬಾರದೆನ್ನುವ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.ಸ್ವಾಮೀಜಿಗಳು ಮನಸ್ಸು ಬಿಚ್ಚಿ ಸಂತೋಷವಾಗಿ ಮಾತನಾಡಿದ್ದಾರೆ.
ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು; ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ತಿಳಿಸಿದ್ದಾಗಿ ಹೇಳಿದರು.ಕಾಂಗ್ರೆಸ್ ಸರಕಾರ ಬಂದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ; ಹೋರಾಟವನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ; ಖಂಡಿತ ನೀವೆಲ್ಲರೂ ಸಹಕಾರ ನೀಡಬೇಕೆಂದು ಹೇಳಿದ್ದಾರೆ. ನಾವು ಕೂಡ ಸಂಪೂರ್ಣ ಸಹಕಾರ, ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ ಎಂದು ತಿಳಿಸಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 