ಜಿ. ಎಚ್‌. ಕಾಲೇಜಿನಲ್ಲಿ ಸಮಾಜ ಶಾಸ್ತ್ರೀಯ ಸಂಶೋಧನಾ ಕಾರ್ಯಾಗಾರ

G. H. Sociological Research Workshop at College

ಹಾವೇರಿ, 30: ನಗರದ ಪ್ರತಿಷ್ಠಿತ ಕೆ.ಎಲ್‌.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗವು ಆಯೋಜಿಸಿದ್ದ ಸಮಾಜ ಶಾಸ್ತ್ರೀಯ ಸಂಶೋಧನನೆಯಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಮತ್ತು ಪ್ರಸ್ತುತ ಸಾಮಾಜಿಕ ಸಮಸ್ಯೆಗಳನ್ನು ಅನ್ವೇಷಿಸುವುದು ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರ ನಡೆಯಿತು.  

ಈ ಕಾರ್ಯಾಗಾರವನ್ನು ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ನವಲಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಸಂತೋಷ ಹುಬ್ಬಳ್ಳಿ ಹಾಗೂ ಬ್ಯಾಡಗಿ ಬಿಇಎಂಎಸ್ ಕಾಲೇಜಿನ ಡಾ. ಪ್ರಭುಲಿಂಗ ದೊಡ್ಡಮನಿ ಆಗಮಿಸಿದ್ದರು. ಪದವಿ ಪ್ರಾಚಾರ್ಯ ಪ್ರೊ. ಡಿ. ಎ. ಕೊಲ್ಹಾಪುರೆ ಅಧ್ಯಕ್ಷೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಪ್ರೊ. ಶರಣಪ್ಪ ಕದರಮಂಡಲಗಿ ಸ್ವಾಗತಿಸಿದರು. ಪ್ರೊ. ಉದಯ ಕುರುಬರ ವಂದಿಸಿದರು.  

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.