ಜಿ.ಪರಮೇಶ್ವರ, ಜಮೀರ್ ಅಹ್ಮದ್‌ಗೆ ಡಿಸಿಎಂ, ಯು.ಟಿ.ಖಾದರ್, ಜೆ.ಎನ್.ಗಣೇಶ್‌ಗೆ ಸಚಿವ ಸ್ಥಾನ.ನೀಡಿ.ಡಿಎಸ್‌ಎಸ್ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಒತ್ತಾಯ
G. Parameshwara, Zameer Ahmed should be made DCM, U.T. Khader, J.N. Ganesh should be made ministers,
ಲೋಕದರ್ಶನ ವರದಿ
ಕಂಪ್ಲಿ 02 : ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಜೂ.3ರಂದು ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದು, ಈ ಸರ್ಕಾರದಲ್ಲಿ ಡಿಸಿಎಂ ಸ್ಥಾನಗಳನ್ನು ಜಿ.ಪರಮೇಶ್ವರ, ಝಡ್ ಜಮೀರ್ ಅಹ್ಮದ್ ಖಾನ್, ಮಂತ್ರಿ ಮಂಡಲದಲ್ಲಿ ಯು.ಟಿ.ಖಾದರ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಬುದ್ಧ, ಬಸವ, ಅಂಬೇಡ್ಕರ್ ವಾದ)ಯ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಒತ್ತಾಯಿಸಿದರು. ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಕಳೆದ ಏಂಟು ವರ್ಷಗಳ ಕಾಲ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಇದರಿಂದ ಜನರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಈಗಾಗಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿದ ಹಿನ್ನಲೆ ತೆರವಾದ ಸ್ಥಾನಕ್ಕೆ ಡಿ.ಕೆ.ಶಿವುಕುಮಾರ ಆಯ್ಕೆಗೊಂಡಿದ್ದು, ಬುಧವಾರದಂದು ಸಂಜೆಯ ಶುಭಗಳಿಗೆಯಲ್ಲಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇನ್ನೂ ಮುಂದೆ ಮತ್ತಷ್ಟು ಯೋಜನೆಗಳು ಬರಪೂರವಾಗಿ ಹರಿದು ಬರಲಿವೆ. ಸಿಎಂ ನಂತರದ ಸ್ಥಾನಗಳಲ್ಲಿ ಒಂದಾದ ಉಪಮುಖ್ಯಮಂತ್ರಿಗಳ ಸ್ಥಾನಕ್ಕೆ ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಲಾಬಿಗಳು ನಡೆಯುತ್ತಿವೆ. ಆದ್ದರಿಂದ ನೂತನ ಮುಖ್ಯಮಂತ್ರಿಗಳು, ಕಾಂಗ್ರೆಸ್ ವರಿಷ್ಠರು ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಗೃಹ ಸಚಿವ ಜಿ.ಪರಮೇಶ್ವರ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇವರಿಗೆ ಡಿಸಿಎಂ ಸ್ಥಾನ ನೀಡಬೇಕು. ಮತ್ತು ಬಳ್ಳಾರಿ ಜಿಲ್ಲಾವರು ಕಾಂಗ್ರೆಸ್ ಪಕ್ಷಕ್ಕೆ ದುಡಿದ ನಿಷ್ಠಾವಂತ ಶಾಸಕ ಜೆ.ಎನ್.ಗಣೇಶ, ಸ್ಪೀಕರ್ ಆಗಿದ್ದ ಯು.ಟಿ.ಖಾದರ್‌ಗೆ ಸಚಿವ ಸ್ಥಾನ ನೀಡಬೇಕು. ಈ ಬೇಡಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್, ವರಿಷ್ಠರು ನೆರವೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಹೋರಾಟಕ್ಕೆ ಇಳಿಯುವ ಜೊತೆಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದರು.ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಿ.ಬಸವರಾಜ, ಕಾರ್ಯದರ್ಶಿ ಮೆಟ್ರಿ ಸೋಮಪ್ಪ, ಅಲ್ಪಸಂಖ್ಯಾತರ ನಗರ ಘಟಕ ಅಧ್ಯಕ್ಷ ಕೆ.ಜಾಫರ್ ಮೆಟ್ರಿ, ಮುಖಂಡರಾದ ಬಾಲಪ್ಪ, ಅಂಜಿನಪ್ಪ, ಯಲ್ಲಪ್ಪ.ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 