ಗ್ರಾಮಗಳ ಸಮಗ್ರ ಅಭಿವೃದ್ಧಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳಿಗೆ ಜಿ.ಪಂ. ಉಪ ಕಾರ್ಯದರ್ಶಿ ಬಸವರಾಜ ಹೆಗ್ಗ ನಾಯಕ ಸೂಚನೆ
G.P. Deputy Secretary Basavaraj Hegga Nayak instructs for comprehensive development of villages and
ಲೋಕದರ್ಶನ ವರದಿ
ಬೆಳಗಾವಿ, ಮೇ.29 : ಚಿಕ್ಕೋಡಿ ತಾಲೂಕಿನ ಹಿರೇಕೋಡಿ, ಕರೋಶಿ ಹಾಗೂ ಕಾಡಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಘನ ತ್ಯಾಜ್ಯ ವಿಲೇವಾರಿ ಕಾರ್ಯಗಳು ಹೇಗೆ ನಡೆಯುತ್ತಿವೆ ಎಂಬುದನ್ನು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಬಸವರಾಜ್ ಹೆಗ್ಗನಾಯಕ್ ಅವರು ಪರೀಶೀಲಿಸಿದರು. ಬುಧವಾರ(ಮೇ.27) ರಂದು ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಮನೆಮನೆಗೆ ಶೌಚಾಲಯಗಳನ್ನು ನಿರ್ಮಿಸಿಕೊಂಡು ಕಡ್ಡಾಯವಾಗಿ ಬಳಸಬೇಕು. ಪರಿಸರ ಸ್ವಚ್ಛತೆಗಾಗಿ ಸಾರ್ವಜನಿಕರು ತಮ್ಮ ಮನೆಯ ಕಸವನ್ನು ನಾಲ್ಕು ಪ್ರಕಾರಗಳಾಗಿ ವಿಂಗಡಿಸಿ, ಗ್ರಾಮ ಪಂಚಾಯಿತಿಯ ಕಸ ಸಂಗ್ರಹಣಾ ವಾಹನಕ್ಕೆ ನೀಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಡಿಜಿಟಲ್ ಗ್ರಂಥಾಲಯಗಳ ಸಮರ್ಕ ನಿರ್ವಹಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸಾರ್ವಜನಿಕರು ಹಾಗೂ ಮುಖ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಪುಸ್ತಕಗಳು ಮತ್ತು ಆಧುನಿಕ ಕಂಪ್ಯೂಟರ್ ಸೌಲಭ್ಯಗಳನ್ನು ಖರೀದಿಸಿ ಒದಗಿಸಬೇಕು.
ತಾಲೂಕು ಪಂಚಾಯಿತಿಯ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ, ಎಲ್ಲ ಅಧಿಕಾರಿಗಳು ಮತ್ತು ನೌಕರರು ಕಚೇರಿಯ ಕಡತಗಳನ್ನು ನಿಯಮಿತವಾಗಿ ಹಾಗೂ ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಕೆಲಸಗಳನ್ನು ವಿಳಂಬ ಮಾಡದೇ ಸಕಾಲದಲ್ಲಿ ಮುಗಿಸುವ ಮೂಲಕ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ಪ್ರಸಕ್ತ ಬೇಸಿಗೆ ಕಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇದರೊಂದಿಗೆ, ಮುಂಬರುವ ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಕಟ್ಟಡಗಳ ಬಗ್ಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಸತಿ ನಿಲಯಗಳು, ಶಾಲೆಗಳು, ಅಂಗನವಾಡಿಗಳು ಸೇರಿದಂತೆ ಸಾರ್ವಜನಿಕ ಕೇಂದ್ರಗಳಾಗಿರುವ ಇತರೆ ಸರ್ಕಾರಿ ಕಟ್ಟಡಗಳಿಗೆ ಮಳೆಯಿಂದ ಯಾವುದೇ ಹಾನಿಯಾಗದಂತೆ ಮುಂಚಿತವಾಗಿಯೇ ಗುರುತಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಆಡಳಿತದ ಮುಖ್ಯ ಕರ್ತವ್ಯ ಎಂದ ಅವರು, ಸಿಬ್ಬಂದಿಗಳಾಗಲಿ ಅಥವಾ ಸಾರ್ವಜನಿಕರಾಗಲಿ ತಮ್ಮ ಅಹವಾಲು ಮತ್ತು ಮನವಿಗಳನ್ನು ತಂದಾಗ ಅಧಿಕಾರಿಗಳು ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ತಳಮಟ್ಟದಲ್ಲಿ ಜನಸಾಮಾನ್ಯರ ಕೆಲಸಗಳು ಸುಲಭವಾಗಿ ಆಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಬಸವರಾಜ್ ಹೆಗ್ಗನಾಯಕ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಟಿ.ಆರ್. ಮಲ್ನಾಡ್, ಎ. ಡಿ. ಎಸ್.ಎಸ್. ಮಠದ, ಇಓ, ಹಾಗೂ ಪಿಡಿಓಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 