ಗದಗ: ಜುಲೈ 19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ
Gadag: National Bhovi Janotsava in Chitradurga on July 19
ಗದಗ, ಜು.10: ಭೋವಿ ಸಮಾಜದ ಪೀಠಾಧಿಪತಿಗಳಾದ ಜಗದ್ಗುರು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಜುಲೈ 19ರಂದು ಚಿತ್ರದುರ್ಗದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಭೋವಿ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ರವಿ ಪೂಜಾರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ, ಎಸ್‌ಎಸ್‌ಎಲ್ಸಿ, ಪಿಯುಸಿ ಹಾಗೂ ಪಿಎಚ್ಡಿ ಪದವಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಐಎಎಸ್, ಐಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ ಹಾಗೂ ಯುವಕರಿಗಾಗಿ ರಕ್ತದಾನ ಶಿಬಿರವೂ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಭೋವಿ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಭೋವಿ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಹಾಗೂ ಸಾಮಾಜಿಕ ನ್ಯಾಯ ದೊರೆಯುತ್ತಿಲ್ಲ. ವಿಧಾನ ಪರಿಷತ್ಗೆ ಭೋವಿ ಸಮುದಾಯದ ಪ್ರತಿನಿಧಿಯನ್ನು ನೇಮಕ ಮಾಡಬೇಕು ಎಂಬುದು ಸಮಾಜದ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರವಿ ಎಲ್. ಗುಂಜೀಕರ, ರಾಜ್ಯ ಉಪಾಧ್ಯಕ್ಷ ಬಸವರಾಜ ಬಳ್ಳಾರಿ, ಜಿಲ್ಲಾಧ್ಯಕ್ಷ ಹುಚ್ಚಪ್ಪ ಸಂದಕದ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಕ್ಕ ಕಳ್ಳಿ, ಪರಶುರಾಮ ಕರಡಿಕೊಳ್ಳ, ಆಂಜನೇಯ ಕಟಗಿ, ರಾಘವೇಂದ್ರ ಧಾರವಾಡ, ಸೋಮು ಗುಡಿ, ಪವನ್ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 