ಗದಗ: ಎಸ್.ಎಚ್. ಬಾದನಟ್ಟಿ ಅವರಿಗೆ ಜಿಲ್ಲಾ ಖಜಾನೆ ಇಲಾಖೆ ವತಿಯಿಂದ ಸನ್ಮಾನ
Gadag: S.H. Badanatti felicitated by the District Treasury Department
ಗದಗ 03: ಗದಗ ಜಿಲ್ಲಾ ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಎಸ್.ಎಚ್. ಬಾದನಟ್ಟಿ ಅವರಿಗೆ ನಗರದ ಜಿಲ್ಲಾ ಖಜಾನೆ ಇಲಾಖೆಯ ಕಚೇರಿಯಲ್ಲಿ ಭಾವಪೂರ್ಣ ವಿದಾಯ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಇಲಾಖೆ, ಜಿಲ್ಲಾ ಖಜಾನೆ ಇಲಾಖೆ ನೌಕರರ ಸಂಘ, ಜಿಲ್ಲಾ ಘಟಕ ಹಾಗೂ ಉಪ ಖಜಾನೆಗಳ ವತಿಯಿಂದ ಬಾದನಟ್ಟಿ ಅವರಿಗೆ ಗೌರವ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸರ್ಕಾರಿ ನೌಕರರು ಸಾರ್ವಜನಿಕ ಸೇವೆಯಲ್ಲಿ ನಿಷ್ಠೆ, ಶಿಸ್ತು ಮತ್ತು ಸಮರಾ್ಣಭಾವದಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಖಜಾನೆ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಹಿರಿಯ ಅಧಿಕಾರಿಗಳು ಬಾದನಟ್ಟಿ ಅವರ ಕಾರ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಸರಳ ಸ್ವಭಾವವನ್ನು ಶ್ಲಾಘಿಸಿ, ಅವರ ಸೇವಾ ಜೀವನ ಮುಂದಿನವರಿಗೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಖಜಾನೆ ಇಲಾಖೆಯ ಸಿಬ್ಬಂದಿ ಹಾಗೂ ನೌಕರರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದು, ನಿವೃತ್ತಿ ಹೊಂದಿದ ಎಸ್.ಎಚ್. ಬಾದನಟ್ಟಿ ಅವರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಮತ್ತು ಸಹೋದ್ಯೋಗಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಭಾವಪೂರ್ಣ ವಿದಾಯ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 