ಗದಗ: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಕುರಿತು ತರಬೇತಿ ಕಾರ್ಯಾಗಾರ
Gadag: Training workshop on Pradhan Mantri Matru Vandana Yojana
ಗದಗ 30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಹಾಗೂ ಗರ್ಭಿಣಿಯರ ಪೌಷ್ಟಿಕತೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಉದ್ಘಾಟಿಸಿ ಮಾತನಾಡಿದರು. ಗರ್ಭಿಣಿಯರ ಅಪೌಷ್ಟಿಕತೆಯನ್ನು ತಡೆಗಟ್ಟುವಲ್ಲಿ ಸರ್ಕಾರಿ ಇಲಾಖೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗರ್ಭಿಣಿಯರಲ್ಲಿ ರಕ್ತಹೀನತೆಯನ್ನು ಕಡಿಮೆಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀಮತಿ ಜಯಶ್ರೀ ಆರ್. ಕಾರ್ಯಕ್ರಮದ ಉದ್ದೇಶ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ರಾಧಾ ಜಿ. ಮಣ್ಣೂರ ಮಾತನಾಡಿ, ತರಬೇತಿಯ ಮಾಹಿತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಯೋಜನೆಯನ್ನು ಸಮರ್ಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಐಪಿಇ ಗ್ಲೋಬಲ್ ಜಿಲ್ಲಾ ಬೆಂಬಲ ವ್ಯವಸ್ಥಾಪಕರಾದ ಯಲ್ಲಪ್ಪ ಕೆ. ಅವರು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಹಾಗೂ ಗರ್ಭಿಣಿಯರ ಪೌಷ್ಟಿಕತೆ ಕುರಿತು ವಿವರವಾದ ಮಾಹಿತಿ ನೀಡಿ ತರಬೇತಿ ನಡೆಸಿಕೊಟ್ಟರು.
ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕರು, ಮೇಲ್ವಿಚಾರಕರು, ಪೋಷಣ್ ಅಭಿಯಾನ ಯೋಜನೆಯ ತಾಲೂಕು ಸಂಯೋಜಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಮೇಲ್ವಿಚಾರಕಿ ಶ್ರೀಮತಿ ರೇಣುಕಾ ಚಂದ್ರಣ್ಣ ಪ್ರಾರ್ಥನೆ ನೆರವೇರಿಸಿದರು. ಜಿಲ್ಲಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸ್ವಾಗತಿಸಿದರು. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕಿ ಶ್ರೀಮತಿ ನೇತ್ರಾ ಹತ್ತಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 