ಗದಗ ತಾ.ಪಂ. ಇಒ ಹುದ್ದೆ ವಿವಾದ: ಅಧಿಕಾರಿ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪ
Gadag Taluk Panchayat EO post controversy: Allegations of assault and death threat against the offic
ಗದಗ, ಜು.30: ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿದ್ದ ಎಚ್.ಎಸ್. ಜಿನಗಿ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ, ಅವರ ಮೂಲ ಇಲಾಖೆಯಾದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಹಿಂದಿರುಗಿಸುವಂತೆ ಸರ್ಕಾರ 2026ರ ಜೂನ್ 16ರಂದು ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರಲಾಗಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಕಾರ್ಯಾಧ್ಯಕ್ಷ ರವಿ ವಗ್ಗನ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಇಲಾಖಾ ನಿಯಮಾವಳಿಗಳ ಪ್ರಕಾರ ಎಚ್.ಎಸ್. ಜಿನಗಿ ಅವರನ್ನು ತಾಲೂಕು ಪಂಚಾಯಿತಿ ಇಒ ಹುದ್ದೆಯ ಹೆಚ್ಚುವರಿ ಪ್ರಭಾರದಿಂದ ಮುಕ್ತಗೊಳಿಸಿ ಮೂಲ ಇಲಾಖೆಗೆ ಕಳುಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.
ಜುಲೈ 23ರಂದು ಮಧ್ಯಾಹ್ನ 2.20ರ ಸುಮಾರಿಗೆ ನಗರದ ಪಾಲಿಕ್ಲಿನಿಕ್ನಲ್ಲಿರುವ ಪಶುವೈದ್ಯಕೀಯ ಇಲಾಖೆಗೆ ಉಪನಿರ್ದೇಶಕರನ್ನು ಭೇಟಿ ಮಾಡಲು ತೆರಳಿದ್ದ ವೇಳೆ, ಅಲ್ಲಿ ಇದ್ದ ಪಶುವೈದ್ಯಾಧಿಕಾರಿ ಡಾ. ಹೀರಾಲಾಲ್ ಎಸ್. ಜಿನಗಿ ಅವರು ತಮ್ಮ ಮೇಲೆ ಏಕಾಏಕಿ ಹಲ್ಲೆಗೆ ಯತ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರವಿ ವಗ್ಗನ ಆರೋಪಿಸಿದರು.
ಅಲ್ಲಿದ್ದ ಡಾ. ಆರ್.ವೈ. ಗುರಿಕಾರ, ಡಾ. ಸತೀಶ ಕಟ್ಟಿಮನಿ, ಡಾ. ಪ್ರಕಾಶ ಜಟ್ಟೆಣ್ಣವರ ಹಾಗೂ ಸಿಬ್ಬಂದಿ ಕಲ್ಮೇಶ ಹಿರೇಮಠ ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರೆಂದು ಅವರು ತಿಳಿಸಿದರು. ಈ ಘಟನೆ ಕುರಿತು ಉಪನಿರ್ದೇಶಕರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ತಮ್ಮ ಜೀವಕ್ಕೆ ಅಪಾಯವಿರುವ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ, ಉಪಾಧ್ಯಕ್ಷ ಗೀರೀಶ ಹೊಸಮನಿ, ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕ್ರಗೌಡ ಪಾಟೀಲ, ಜಿಲ್ಲಾ ಕಾರ್ಯದರ್ಶಿ ಈಶ್ವರ ಗದಗಿನ, ತಾಲೂಕು ಕಾರ್ಯದರ್ಶಿ ರೇವಣಸಿದ್ದಪ್ಪ ಬೀಡನಾಳ, ತಾಲೂಕು ಸಂಚಾಲಕ ಶರಣಪ್ಪ ಕಮ್ಮಾರ ಹಾಗೂ ತಾಲೂಕು ಕಾರ್ಯಾಧ್ಯಕ್ಷ ಗೂಳಪ್ಪ ಗುಡದೂರ ಸೇರಿದಂತೆ ಇತರರು ಉಪಸ್ಥಿತರಿದ್ದರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 