ಅರುಂಪಾರ್ಥಪುರಂ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದ ಗಡ್ಕರಿ
ಪುದುಚೆರಿ, ಅಕ್ಟೋಬರ್ 7: ಪುದುಚೆರಿಯ ಅರುಂಪಾರ್ಥಪುರಂ ರಸ್ತೆಯ ಮೇಲ್ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು.
ಒಂದು ಕಿಲೋಮೀಟರ್ ಉದ್ದದ ಈ ಮೇಲ್ಸೇತುವೆಯನ್ನು 35 ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾಗಿದೆ.
ಇವರೊಂದಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಯ ರಾಜ್ಯ ಸಚಿವ ಡಾ.ವಿಜಯ್ ಕುಮಾರ್ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡರು. ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮತ್ತಿತರರ ಸಂಪುಟ ಸಚಿವರು ಕೂಡ ಪಾಲ್ಗೊಂಡಿದ್ದರು.