ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಗಜಾನನೋತ್ಸವ

ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಗಜಾನನೋತ್ಸವ Gajanan festival at Maharana Pratap Simha Educational Institute

ಲೋಕದರ್ಶನ ವರದಿ 

ಬೆಟಗೇರಿ 18 : ಇಲ್ಲಿಯ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ದಿ. 14 ರಂದು ಜೋಡು ಗಣೇಶನ ಪ್ರತಿಷ್ಟಾಪನೆ ನೆರವೇರಿಸಿ ಐದು ದಿನಗಳ ಕಾಲ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಶ್ರದ್ಧಾಭಕ್ತಿಯಿಂದ ಪೂಜೆ ನೆರವೇರಿಸಿ ದಿನಾಂಕ 18 ರಂದು ಗಜಾನನನ ವಿಸರ್ಜನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿ, ಪ್ರಾ. ಎಸ್‌.ಎಂ. ಉಳ್ಳಾಗಡ್ಡಿ, ಮುಖ್ಯಾಧ್ಯಾಪಕ ಎಸ್‌.ಎಸ್‌. ಬಡಿಗೇರ ಸಮಸ್ತ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.