ಶಿಗ್ಗಾವ್

ಶಿಕ್ಷಣ ಸಂಸ್ಥೆಗಳಿಂದ ಪ್ರತಿಷ್ಠಾಪಿಸಿದ ಗಣಪತಿ ವಿಸರ್ಜನೆ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳಿಂದ ಪ್ರತಿಷ್ಠಾಪಿಸಿದ ಗಣಪತಿ ವಿಸರ್ಜನೆ ಕಾರ್ಯಕ್ರಮ

ಶಿಗ್ಗಾವಿ 05:  ಗಣಪತಿಯನ್ನು ಶಾಲೆಯಲ್ಲಿ ಪ್ರತಿಷ್ಠಾಪಿಸಿ ಐದು ದಿನಗಳ ಕಾಲ ಶ್ರದ್ಧಾ, ಭಕ್ತಿಯಿಂದ ಪೂಜಿಸಿ ಆರಾಧನೆ ಮಾಡಲಾಗಿದೆ. ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯನ್ನು ಕರುಣಿಸಲೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಂಸದರಾದ ಮಂಜುನಾಥ ಕುನ್ನೂರ ಶುಭ ಹಾರೈಸಿದರು. 

ನಗರದ ಚನ್ನಬಸವೇಶ್ವರ ಗ್ರಾಮೀಣ ವಿದ್ಯಾ ಸಂಸ್ಥೆಯ ಚನ್ನಪ್ಪಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಭಾರತದಲ್ಲಿ ವಿವಿಧ ಹಬ್ಬ-ಹರಿದಿನಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಗಣೇಶ ಹಬ್ಬ ಸಂಸ್ಕ್ರತಿ, ಪರಂಪರೆಯ ಸಂದೇಶ ಸಾರುತ್ತದೆ. ಜತೆಗೆ ಸಮಾಜದಲ್ಲಿ ಪರಸ್ಪರ ನಾವೆಲ್ಲರೂಒಂದು ಎಂಬ ಮನೋಭಾವನೆಯನ್ನು ಮೂಡಿಸುತ್ತದೆ ಎಂದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚಿಕ್ಕೋಡಿ ಮಾಜಿ ಶಾಸಕ ಬಾಳಾಸಾಹೇಬ ವಡ್ಡರ ಮಾತನಾಡಿ, ಗೌರಿಸುತಗಣಪತಿ ವಿದ್ಯ ಹಾಗೂ ಜ್ಞಾನದ ಅಧಿಪತಿಯಾಗಿದ್ದು, ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮತ್ತು ಭಕ್ತಿಯಿಂದ ಗಣೇಶನನ್ನು ಆರಾಧಿಸಬೇಕು. ಅಂದಾಗ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿ ಸಮೂಹಕ್ಕೆ ಸಲಹೆ ನೀಡಿದರು. 

ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅವರು, ದೇಶದಲ್ಲಿಅತ್ಯಂತ ವೈಭವ ಹಾಗೂ ಸಂಭ್ರಮದಿಂದ ಆಚರಿಸುವ ಗಣೇಶ ಚತುರ್ಥಿ ಆರಂಭದ ಬಗೆ, ಆಚರಣೆ ಮತ್ತು ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. 

ಗಣೇಶೋತ್ಸವ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಏರಿ​‍್ಡಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಿ, ಪ್ರೋತ್ಸಾಹಿಸಲಾಯಿತು. 

ಕಾರ್ಯಕ್ರಮದಲ್ಲಿ ಕಲ್ಯಾಣಕುಮಾರ ವಡ್ಡರ, ಮುಖ್ಯ ಶಿಕ್ಷಕರಾದ ಸಿ.ಟಿ.ಪಾಟೀಲ, ಎಂ.ಬಿ.ಅರಗೋಳ, ಮಂಜುನಾಥ ನೀರಲಗಿ, ಶಿವು ಹಾವೇರಿ, ರವಿ ಮಹಾಂತ ಶೆಟ್ಟರ, ಶಿಕ್ಷಕರ ಬಳಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 


ಸುದ್ದಿ ಓದಿ