ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಗಾಂಧಿ ಪುಣ್ಯಸ್ಮರಣೆ

ಧಾರವಾಡ ಜ.30 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ನಿಮಿತ್ಯ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪುಷ್ಪಾರ್ಪಣೆ ಮಾಡಿ, ನಮನ ಸಲ್ಲಿಸಿದರು.

ನಂತರ ಅವರು ಸಿಬ್ಬಂದಿಗಳೊಂದಿಗೆ ಮೌನಾಚರಣೆ ಮಾಡಿ, ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋದಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರಗಯಕ್ರಮದಲ್ಲಿ ಭಾಗವಹಿಸಿದ್ದರು.