ಗಾಂಧಿ ಜಯಂತಿ: ಜಿಲ್ಲಾ ಪಂಚಾಯತ್ನಿಂದ ಶ್ರಮದಾನ
ಹೊಸಪೇಟೆ (ವಿಜಯನಗರ),ಅ.3: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ವಚ್ಚತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಪಂಚಾಯತ್ ಕಚೇರಿ ಸಿಬ್ಬಂದಿ ಸೋಮವಾರ ಕಚೇರಿ ಆವರಣದಲ್ಲಿ ಸ್ವಚ್ಚತೆ ಕೈಗೊಂಡರು. ಜಿಲ್ಲಾ ಪಂಚಾಯಿತಿ ಕಚೇರಿ ಸಿಬ್ಬಂದಿ ಪೊರಕೆ ಹಿಡಿದು ಆವರಣವನ್ನು ಸ್ವಚ್ಚಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಅಶೋಕ ತೋಟದ್, ಸಹಾಯಕ ನಿರ್ದೇಶಕ ಎಸ್.ವಿ ಕಾಂಬ್ಳೆ ಸೇರಿದಂತೆ ಬಸವರಾಜ, ಲೋಕೇಶ ಬಾಬು, ಕವಿತಾ ಕರಣಂ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾನುವಾರ ಸ್ವಚ್ಚತಾ ಅಭಿಯಾನದ ಭಾಗವಾಗಿ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಆಸ್ಪತ್ರೆ ಆವರಣವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಸ್ವಚ್ಚಗೊಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ನಾಯ್ಕ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಜಂಬಯ್ಯ ನಾಯಕ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಉಪಸ್ಥಿತರಿದ್ದರು.
ಹೊಸಪೇಟೆಯ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿ ಆಚರಣೆಯನ್ನು ಕೈಗೊಳ್ಳಲಾಯಿತು.
ಕಾಲೇಜಿನ ಆವರಣದಲ್ಲಿ ಸೋಮವಾರ ಸ್ವಚ್ಚತೆಯೇ ಸೇವೆ ಅಭಿಯಾನದ ಭಾಗವಾಗಿ ಶ್ರಮದಾನ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸಿದ್ಧರಾಮ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ವಿಜಯ ಭಾಸ್ಕರ್, ಉಪನ್ಯಾಸಕ ದಯಾನಂದ ಕಿನ್ನಾಳ್, ತಿಮ್ಮಪ್ಪ, ರಾಮಾಲಿ ಬಂಡೆ ಅವರು ಉಪಸ್ಥಿತರಿದ್ದರು.