ಗಾಂಧಿ ಜಯಂತಿ: ತಾಪಂನಲ್ಲಿ ಸ್ವಚ್ಛತಾ ಸೇವಾ ಅಭಿಯಾನ
ಸವದತ್ತಿ 02: ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಆನಂದ ಬಡಕುಂದ್ರಿ ಅವರು ಗಣ್ಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿಯವರ ಸ್ವಚ್ಛತೆ ಹಾಗೂ ನೈರ್ಮಲ್ಯದ ಆಶಯಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ ಕಚೇರಿ ಆವರಣದಲ್ಲಿ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು.
ನಂತರ ತಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನದಲ್ಲಿ ಪಾಲ್ಗೊಂಡು ಕಚೇರಿ ಆವರಣವನ್ನು ಸ್ವಚ್ಛಗೊಳಿಸಿದರು. ಅಭಿಯಾನದ ಅಂಗವಾಗಿ ಸಸಿಗಳನ್ನು ನೆಡಲಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಮೈತ್ರಾದೇವಿ ವಸ್ತ್ರದ, ಮಲ್ಲಿಕಾರ್ಜುನ ಕಂಬಿ ಸೇರಿದಂತೆ ತಾಪಂನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.