ಬಾಗಲಕೋಟೆ

ಜಿಲ್ಲಾಡಳಿತದಿಂದ ಗಾಂಧೀ-ಶಾಸ್ತ್ರೀ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಗಾಂಧೀ-ಶಾಸ್ತ್ರೀ ಜಯಂತಿ ಆಚರಣೆ


ಬಾಗಲಕೋಟೆ 02: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಾಗಲಕೋಟೆ ಶಾಸಕ ಉಮೇಶ ಮೇಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಸೇರಿದಂತೆ ಗಣ್ಯರು ಗಾಂಧೀಜಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಿದರು.  

ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಗುರುಗಳು ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಪಠಣ ಮಾಡಿದರು. ಗಾಂಧೀಜಿ ಅವರ ಅಹಿಂಸೆ, ಸತ್ಯಾಗ್ರಹ, ಸರಳ ಜೀವನ ಹಾಗೂ ಸರ್ವಧರ್ಮ ಸಮಭಾವದ ಆದರ್ಶಗಳನ್ನು ಸ್ಮರಿಸಲಾಯಿತು. ಲಾಲ್ ಬಹದ್ದೂರ್ ಶಾಸ್ತ್ರೀ ಅವರ ದೇಶದ ಅಭಿವೃದ್ಧಿ, ಶಿಸ್ತು ಹಾಗೂ ಪ್ರಾಮಾಣಿಕ ಆಡಳಿತಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ‘ವಾರ್ತಾ ಜನಪರ’ ವಿಶೇಷ ಸಂಚಿಕೆಯನ್ನು ಶಾಸಕ ಉಮೇಶ ಮೇಟಿ ಸೇರಿದಂತೆ ಗಣ್ಯರು ಬಿಡುಗಡೆಗೊಳಿಸಿದರು. ಬಳಿಕ ಸಾಮೂಹಿಕವಾಗಿ ‘ರಘುಪತಿ ರಾಘವ ರಾಜಾರಾಮ’ ಗೀತೆ ಹಾಡಲಾಯಿತು.  


ಸುದ್ದಿ ಓದಿ