ಗಾಂಧಿಜೀ, ಶಾಸ್ತ್ರಿಜೀ ಜಯಂತ್ಯೋತ್ಸವ
ರಾಣೇಬೆನ್ನೂರು 04: ತಾಲೂಕಿನ ಮಾಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿಜೀ ಯವರ 155 ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜೀ ಯವರ 120 ನೇ ಜಯಂತ್ಯೋತ್ಸವ ಕಾರ್ಯಕ್ರಮನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಕುಂಬಳೂರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ದೇಶದ ಮಹಾತ್ಮರ ಜೀವನ ಚರಿತ್ರೆಗಳನ್ನು ಸರಿಯಾಗಿ ಓದಿ ಉತ್ತಮ ನಾಯಕರಾಗಲು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕರಾದ ಸಿದ್ದಪ್ಪ ಎಸ್, ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.
ಪೋಟೋ:3ಆರ್ಎನ್ಆರ್01. ರಾಣೇಬೆನ್ನೂರು: ತಾಲೂಕಿನ ಮಾಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜೀಯವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಕುಂಬಳೂರು ಉದ್ಘಾಟಿಸಿದರು. -02-