ಸಿಂಧಗಿ

ಗಾಂಧೀಜಿ-ಶಾಸ್ತ್ರಿ ಆದರ್ಶಗಳು ದಾರೀದೀಪ

ಗಾಂಧೀಜಿ-ಶಾಸ್ತ್ರಿ ಆದರ್ಶಗಳು ದಾರೀದೀಪ


ಸಿಂದಗಿ 02: ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗ ಹಾಗೂ ಸರಳ ಜೀವನಶೈಲಿ ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಹಾಗೂ ಶಾಲಾ ನಿರ್ದೇಶಕ ಎಂ.ಎಂ. ಪಡಶೆಟ್ಟಿ ಹೇಳಿದರು. ಪಟ್ಟಣದ ಹೊರವಲಯದ ಭೀಮಾ ಯೂನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

“ನನ್ನ ಜೀವನವೇ ನನ್ನ ಸಂದೇಶ” ಎಂಬುದನ್ನು ಸಾರಿದ ಗಾಂಧೀಜಿ ಸರಳ ಜೀವನ ಹಾಗೂ ಅಹಿಂಸಾತ್ಮಕ ಹೋರಾಟದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಅವರ ಹೋರಾಟವು ವಿಶ್ವದ ಹಲವು ಸ್ವಾತಂತ್ರ್ಯ ಚಳವಳಿಗಳಿಗೆ ಸ್ಫೂರ್ತಿಯಾಯಿತು. ಅದೇ ರೀತಿ ಸರಳತೆ ಹಾಗೂ ಸೌಜನ್ಯಕ್ಕೆ ಹೆಸರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು “ಜೈ ಜವಾನ್, ಜೈ ಕಿಸಾನ್‌” ಘೋಷಣೆಯ ಮೂಲಕ ದೇಶದ ಪ್ರಗತಿಗೆ ಶ್ರಮಿಸಿದರು ಎಂದು ಸ್ಮರಿಸಿದರು.  


ಸುದ್ದಿ ಓದಿ