ಗಾಂದೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಆಚರಣೆ
ತಾಳಿಕೋಟಿ 03 : ಪಟ್ಟಣದ .ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ದೇಶದ ಮಹಾನ್ ನಾಯಕರದ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಜಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಇಬ್ಬರೂ ಮಹನೀಯರ ಭಾವ ಚಿತ್ರಗಳಿಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರು ಪೂಜೆ ಸಲ್ಲಿಸಿದರು. ನಂತರ ಅವರು ಮಾತನಾಡಿ ಇಬ್ಬರು ಮಹಾನ್ ನಾಯಕರು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡುವಲ್ಲಿ ಸಾಕಷ್ಟು ತ್ಯಾಗಗಳನ್ನು ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ಬದುಕಿನ ಆದರ್ಶಗಳು ನಮಗೆಲ್ಲರಿಗೂ ಮಾದರಿಯಾಗಬೇಕು ಎಂದರು. ಉಪನ್ಯಾಸಕ ಪರಶುರಾಮ ಚೌಡಕರ ಪ್ರಾರ್ಥನಾ ಗೀತೆಯನ್ನು ಹಾಡಿದರು. ಪ್ರಕಾಶ ವಾಲೀಕಾರ ಸ್ವಾಗತಿಸಿದರು. ಹಿರಿಯ ಶಿಕ್ಷಕ ಎಸ್.ವಿ.ಜಾಮಗೊಂಡಿಯವರು ಮಹನೀಯರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬ್ರಹ್ಮಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ವಿ.ಎ.ವಿಜಾಪುರ ಇವರಿಗೆ ಸಂಸ್ಥೆಯವತಿಯಿಂದ ಅಧ್ಯಕ್ಷರು, ಪಿಯು ವಿಭಾಗದ ಸಿಬ್ಬಂದಿಗಳು, ಪ್ರೌಢಶಾಲೆ ಸಿಬ್ಬಂದಿಗಳುಗೌರವಿಸಿದರೆ, ಹ್ಯಾಂಡ ಬಾಲ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಸತತವಾಗಿ ಮೂರು ಬಾರಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಮತ್ತು ತರಬೇತಿದಾರ ನವೀನ ಇಜೇರಿ ಇವರಿಗೆ ಸಂಸ್ಥೆ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಶಾಂತಪ್ಪ ಹಡಪದ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಚ್.ಬಿ.ನಡುವಿನಕೇರಿ, ಪದವಿ ಪೂರ್ವ ವಿದ್ಯಾಲಯದ ದೈಹಿಕ ನಿರ್ದೇಶಕ ಎಸ್.ಬಿ.ಮಂಗ್ಯಾಳ, ಡಿ.ಎಚ್.ಐ.ವಿಭಾಗದ ಜೆ.ಸಿ.ಪಾಟೀಲ ಹಾಗೂಪರಶುರಾಮ ಚೌಡಕರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಮಸ್ತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕ ಬಿ.ಐ.ಹಿರೇಹೊಳಿ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.