ಬಳ್ಳಾರಿ ಜಿಲ್ಲಾ ವಾಣಿಜ್ಯ ಸಂಸ್ಥೆಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ
ಬಳ್ಳಾರಿ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಗುರುವಾರ ಆಚರಿಸಲಾಯಿತು.
ಸಂಸ್ಥೆಯ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಮಾಲಾರೆ್ಣ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೋಂತ ಗಿರಿಧರ ಹಾಗೂ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಮಾಜಿ ಅಧ್ಯಕ್ಷ ಡಾ. ಡಿ.ಎಲ್. ರಮೇಶಗೋಪಾಲ್, ವಿವಿಧ ಸಮಿತಿ ಚೇರ್ಮನ್ಗಳಾದ ನಾಗಳ್ಳಿ ರಮೇಶ, ವೇಣುಗೋಪಾಲ ಗುಪ್ತ, ಕೌಡಕಿ ಹನುಮೇಶಬಾಬು, ಬಿ. ಸುರೇಂದ್ರ ಕುಮಾರ ಬಫಾನ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಮಿತಿ ಚೇರ್ಮನ್ಗಳು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.