ಗಾಂಧೀಜಿ, ಶಾಸ್ತ್ರಿ ಆದರ್ಶ ಯುವಜನತೆಗೆ ಸ್ಫೂರ್ತಿ
ಯಲಬುರ್ಗಾ 02: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶದ ಸ್ವಾತಂತ್ರ್ಯ ಹೋರಾಟ, ಸಾಮಾಜಿಕ ಸುಧಾರಣೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯ. ಅವರ ಸರಳ ಜೀವನ, ಉನ್ನತ ಚಿಂತನೆ ಮತ್ತು ದೇಶಭಕ್ತಿಯ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಉಭಯ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರು ಅಹಿಂಸೆ ಹಾಗೂ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಸಮಾನತೆಯ ಸಮಾಜ ನಿರ್ಮಾಣ, ಸ್ವದೇಶಿ ಚಳವಳಿ ಹಾಗೂ ಸಾಮಾಜಿಕ ಸುಧಾರಣೆಗಳ ಮೂಲಕ ಜನರಲ್ಲಿ ರಾಷ್ಟ್ರೇ್ರಮದ ಜಾಗೃತಿ ಮೂಡಿಸಿದರು. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.