ಜಮಖಂಡಿ

ದೇಶದ ಉದ್ಧಾರಕ್ಕಾಗಿ ಮಿನುಗಿದ ಎರಡು ನಕ್ಷತ್ರಗಳು ಗಾಂಧೀಜಿ, ಶಾಸ್ತ್ರಿಜೀ

ದೇಶದ ಉದ್ಧಾರಕ್ಕಾಗಿ ಮಿನುಗಿದ ಎರಡು ನಕ್ಷತ್ರಗಳು ಗಾಂಧೀಜಿ, ಶಾಸ್ತ್ರಿಜೀ

ಲೋಕದರ್ಶನ ವರದಿ 

ಜಮಖಂಡಿ, ಅ. 2: ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿಗಾಗಿ ಶ್ರಮಿಸಿದ ಇಬ್ಬರು ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜೆಎಸ್‌ಎಸ್ನ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಹೇಳಿದರು.  

ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಎಂಸಿಎ ಕಾಲೇಜು ಹಾಗೂ ಜೆಎಸ್‌ಎಸ್ ಐಟಿಐ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.  

ಮಹಾತ್ಮ ಗಾಂಧೀಜಿ ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ತೋರಿಸಿದರೆ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಆದರ್ಶವನ್ನು ತೋರಿಸಿದರು. ಗಾಂಧೀಜಿ ಕೇವಲ ಸ್ವಾತಂತ್ರ್ಯಕ್ಕಾಗಿ ಹೋರಾಡದೆ, ಪ್ರತಿಯೊಬ್ಬರೂ ತಮ್ಮ ಜೀವನವನ್ನು ಸುಧಾರಿಸಿಕೊಳ್ಳಬೇಕು, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು, ಸ್ವದೇಶಿ ವಸ್ತುಗಳನ್ನು ಬಳಸಬೇಕು ಹಾಗೂ ಸಮಾಜದಲ್ಲಿ ಸಮಾನತೆಯನ್ನು ಬೆಳೆಸಬೇಕು ಎಂಬ ಸಂದೇಶ ನೀಡಿದ್ದರು ಎಂದರು.  

ಗಾಂಧೀಜಿಯವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಅವರ ಸ್ವಚ್ಛತೆ ಕುರಿತ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ. ಅಹಿಂಸೆಯ ಸಂದೇಶವು ಜಗತ್ತಿನಾದ್ಯಂತ ಶಾಂತಿ ಮತ್ತು ಮಾನವೀಯತೆಯ ಸಂಕೇತವಾಗಿದೆ. ಗಾಂಧೀಜಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸುತ್ತಿದೆ ಎಂದು ತಿಳಿಸಿದರು.  


ಸುದ್ದಿ ಓದಿ