ಕೊಪ್ಪಳ

ಗಾಂಧೀಜಿಯವರ ಸತ್ಯ ಅಹಿಂಸೆ ಮತ್ತು ಸರಳ ಜೀವನದ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರೀದೀಪವಾಗಿದೆ

ಗಾಂಧೀಜಿಯವರ ಸತ್ಯ ಅಹಿಂಸೆ ಮತ್ತು ಸರಳ ಜೀವನದ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರೀದೀಪವಾಗಿದೆ
Gandhiji's ideals of truth, non-violence, and simple living continue to serve as a guiding light for

ಕೊಪ್ಪಳ  02: ಭಾರತ ಕಂಡ ಮಹಾ ನಾಯಕ ನಮ್ಮ ದೇಶದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಸರಳ ಜೀವನದ ಆದರ್ಶಗಳು ಇಂದಿಗೂ ಕೂಡ ಸಮಾಜಕ್ಕೆ ದಾರೀದೀಪವಾಗಿದೆ ಎಂದು ಇರಕಲ್ ಗಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ಸೈಯದ್ ನಜೀರ್ ಅಹ್ಮದ್ ಅತ್ತಾರ್ ಅವರು ಹೇಳಿದರು, ಅವರು ನಗರದ ಮಿಲ್ಲತ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಏರಿ​‍್ಡಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು, ಮುಂದುವರಿದು ಮಾತನಾಡಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ ಸರಳತೆ ದೇಶಪ್ರೇಮ ಹಾಗೂ ಕರ್ತವ್ಯ ನಿಷ್ಠೆ  ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿಯಾಗಬೇಕು ಇಬ್ಬರು ಮಹನೀಯರ ಆದರ್ಶಗಳನ್ನು ನಾವುಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ನಮ್ಮ ಬದುಕು ಕಟ್ಟಿಕೊಂಡು ಜೀವನ ಸಾಗಿಸಿದರೆ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು, ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸೈಯದ್ ಗೌಸ್ ಪಾಷಾ ಖಾಜಿ ರವರು ವಹಿಸಿ ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲ ಗೊಳ್ಳಲು ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು ಎಂದರು, ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಪ್ರಸ್ತಾವಿಕವಾಗಿ ಮಾತನಾಡಿದರು ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ಆರಂಭದಲ್ಲಿ ಸ್ವಾಗತಿಸಿ ಕಾರ್ಯ ಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು, ಸಹ ಶಿಕ್ಷಕರು ಇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 


ಸುದ್ದಿ ಓದಿ