ಸೂರಣಗಿ ಗ್ರಾಮದಲ್ಲಿ ಗಣೇಶೋತ್ಸವ: ಬಿ.ಟಿ. ಚಂದ್ರಶೇಖರ್ಗೆ ಸನ್ಮಾನ
Ganesha Festival in Sooranagi Village: B.T. Chandrashekhar Felicitated
ಲಕ್ಷ್ಮೇಶ್ವರ, ಸೆ.25: ರೈತರ ಸಮಸ್ಯೆಗಳನ್ನು ಆಲಿಸಿ, ನಿರಂತರವಾಗಿ ರೈತರ ಪರ ಹೋರಾಟ ನಡೆಸುತ್ತಿರುವುದಾಗಿ ಹೇಳಿದ ರಾಜ್ಯ ರೈತೋದಯ ಹಸಿರು ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ 1008 ಬಡವರ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ 2028ರ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಬಿ.ಟಿ. ಚಂದ್ರಶೇಖರ್ ಅವರಿಗೆ ತಾಲೂಕಿನ ಸೂರಣಗಿ ಗ್ರಾಮದ ಗಣೇಶೋತ್ಸವ ಮಂಡಳಿಯವರು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರದ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದರು. ಅಲ್ಲದೆ, ರಾಜ್ಯದಲ್ಲಿ ಆವರಿಸಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಪ್ರತಿ ಎಕರೆಗೆ ?25 ಸಾವಿರ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಸೇವಾ ಆಕಾಂಕ್ಷಿ ಐ.ಎಸ್. ಪೂಜಾರ ಸೇರಿದಂತೆ ಗ್ರಾಮದ ಗುರುಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 