ಗಣೇಶ ವಿಸರ್ಜನೆ: ಕೃತಕ ಹೊಂಡಗಳ ಕಾಮಗಾರಿ ಪರೀಶೀಲಿಸಿದ ಜಿಲ್ಲಾಧಿಕಾರಿ
Ganesha discharge: Collector inspected the work of artificial pits
ಲೋಕದರ್ಶನ ವರದಿ
ವಿಜಯಪುರ 07 : ಮುಂಬರುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ನಿರ್ಮಿಸಲಾಗುತ್ತಿರುವ ಗಣೇಶ ವಿಸರ್ಜನೆಗಾಗಿ ಕೃತಕ ಹೊಂಡಗಳ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಸೋಮವಾರ ಸ್ಥಳ ಪರೀಶೀಲನೆ ನಡೆಸಿದರು. ನಗರದ ಜೈಲ್ ದರ್ಗಾ ಬಳಿ 100ಥ40 ಚದರ ಅಡಿ ಅಳತೆಯ ಹಾಗೂ ಕೆಎಸ್‌ಆರ್‌ಟಿಸಿ ಸ್ಯಾಟಲೈಟ್ ಬಸ್ ನಿಲ್ದಾಣದ ಸಮೀಪ ತಾತ್ಕಾಲಿಕವಾಗಿ ನಿರ್ಮಿಸಲಾಗುತ್ತಿರುವ ಕೃತಕ ಹೊಂಡಗಳ ಕಾಮಗಾರಿಯನ್ನು ಪರೀಶೀಲಿಸಿದ ಜಿಲ್ಲಾಧಿಕಾರಿಗಳು, ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು,
ಭಕ್ತಾದಿಗಳು ಹಾಗೂ ಗಣೇಶ ಮಂಡಳಿಗಳ ಪದಾಧಿಕಾರಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃತಕ ಹೊಂಡಗಳ ಸ್ಥಳದಲ್ಲಿ ಸುಸಜ್ಜಿತ ಆಗಮನ ಮತ್ತು ನಿರ್ಗಮನ ಮಾರ್ಗ, ಸಮರ್ಕ ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ಅಗತ್ಯ ಬ್ಯಾರಿಕೇಡ್‌ಗಳ ಅಳವಡಿಕೆ ಮಾಡಬೇಕು. ಜನದಟ್ಟಣೆಯನ್ನು ನಿಯಂತ್ರಿಸುವುದು, ವಾಹನಗಳ ಸುಗಮ ಸಂಚಾರ ಹಾಗೂ ಭಕ್ತಾದಿಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಗಣೇಶ ಹಬ್ಬ ಆರಂಭವಾಗುವ ಎರಡು ದಿನಗಳ ಮುಂಚಿತವಾಗಿಯೇ ಕೃತಕ ಹೊಂಡಗಳ ಕಾಮಗಾರಿ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಸಂಪೂರ್ಣಗೊಳಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ವಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 