ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮೃತ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆ 6ಕ್ಕೆ ಏರಿಕೆ
Gas cylinder blast case: Number of dead Ayyappa Maladharis rises to 6
ಹುಬ್ಬಳ್ಳಿ 29: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ ಮತ್ತು ಮಂಜುನಾಥ ವಾಗ್ಮೋಡೆ ಮೃತ ಅಯ್ಯಪ್ಪ ಮಾಲಾಧಾರಿಗಳಾಗಿದ್ದು, ಈ ಮೂಲಕ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.
ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಆರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಇನ್ನೂ ಮೂವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 