ಗೌರಿ ಗಣೇಶ ಹಬ್ಬ: ವಿವಿಧ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ
Gauri-Ganesha Festival: Ban on liquor sales on various days
ಬಳ್ಳಾರಿ, ಸೆ.16 (ಕರ್ನಾಟಕ ವಾರ್ತೆ): 2026ನೇ ಸಾಲಿನ ಗೌರಿ ಗಣೇಶ ಹಬ್ಬ ಹಾಗೂ ಗಣಪತಿ ವಿಸರ್ಜನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಳ್ಳಾರಿ ಜಿಲ್ಲಾದ್ಯಂತ ವಿವಿಧ ದಿನಗಳಲ್ಲಿ ಮದ್ಯ ಮಾರಾಟ, ಸಾಗಾಣಿಕೆ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಆದೇಶಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅಡಿಯಲ್ಲಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಮದ್ಯ ಮಾರಾಟ ನಿಷೇಧದ ವಿವರ:
ಸೆ.16: ಗಣಪತಿ ವಿಸರ್ಜನೆಯ 3ನೇ ದಿನದ ಅಂಗವಾಗಿ ಬಳ್ಳಾರಿ ಜಿಲ್ಲಾದ್ಯಂತ ಸೆ.16ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ.
ಸೆ.18: 5ನೇ ದಿನದ ಗಣಪತಿ ವಿಸರ್ಜನೆಯ ಅಂಗವಾಗಿ ಸೆ.18ರ ಬೆಳಗ್ಗೆ 6ರಿಂದ ಸೆ.19ರ ಬೆಳಗ್ಗೆ 6ರವರೆಗೆ ಬಳ್ಳಾರಿ ಜಿಲ್ಲಾದ್ಯಂತ.
ಸೆ.20: 7ನೇ ದಿನದ ಗಣಪತಿ ವಿಸರ್ಜನೆಯ ಅಂಗವಾಗಿ ಬಳ್ಳಾರಿ ನಗರಾದ್ಯಂತ ಸೆ.20ರ ಬೆಳಗ್ಗೆ 6ರಿಂದ ಸೆ.21ರ ಬೆಳಗ್ಗೆ 6ರವರೆಗೆ.
ಸೆ.24: 11ನೇ ದಿನದ ಗಣಪತಿ ವಿಸರ್ಜನೆಯ ಅಂಗವಾಗಿ ಸಿರುಗುಪ್ಪ ನಗರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಸೆ.24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ರವರೆಗೆ.
ಸೆ.26: 13ನೇ ದಿನದ ಗಣಪತಿ ವಿಸರ್ಜನೆಯ ಅಂಗವಾಗಿ ಕಂಪ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿ ಮತ್ತು ತೆಕ್ಕಲಕೋಟೆ ಪಟ್ಟಣಾದ್ಯಂತ ಸೆ.26ರ ಬೆಳಗ್ಗೆ 6ರಿಂದ ಸೆ.27ರ ಬೆಳಗ್ಗೆ 6ರವರೆಗೆ.
ಈ ನಿಷೇಧಾಜ್ಞೆಯು ಡಿಸ್ಟಿಲರಿಗಳಿಂದ ರಾಜ್ಯದ ವಿವಿಧ ಕೆಎಸ್ಬಿಸಿಎಲ್ ಡಿಪೋಗಳಿಗೆ ದಾಸ್ತಾನು ವಿಲೇವಾರಿ ಮಾಡುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 