ಗೌರಿ-ಗಣೇಶ ಹಬ್ಬ: ಬಳ್ಳಾರಿ ಜಿಲ್ಲಾದ್ಯಂತ ಡಿಜೆ, ಹೈ-ಬೇಸ್ ಸೌಂಡ್ ಬಳಕೆ ಸಂಪೂರ್ಣ ನಿಷೇಧ
Gauri-Ganesha Festival: Complete ban on the use of DJs and high-bass sound systems across Ballari di
ಲೋಕದರ್ಶನ ವರದಿ
ಬಳ್ಳಾರಿ, ಸೆ.11: ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲಾದ್ಯಂತ ಡಿಜೆ ಹಾಗೂ ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದು, ‘ಭಾರತೀಯ ನಾಗರಿಕ ಸುರಕ್ಷಾ ಕಲಂ 152 ಮತ್ತು 163ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ನಿಷೇಧಾಜ್ಞೆಯು ಸೆ.14ರಿಂದ ಶ್ರೀ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲಾದ್ಯಂತ ಜಾರಿಯಲ್ಲಿರಲಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷವಾಗಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಬಾಕ್ಸ್ಗಳಿಂದ ಉಂಟಾಗುವ ಅತಿಯಾದ ಹಾಗೂ ನಿರಂತರ ಶಬ್ದ ಮಾಲಿನ್ಯದಿಂದ ವಯೋವೃದ್ಧರು, ಮಕ್ಕಳು, ಗರ್ಭಿಣಿಯರು ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಆದೇಶದಂತೆ ಡಿಜೆ ಸೌಂಡ್ ಸಿಸ್ಟಂ, ಹೈ-ಬೇಸ್ ಸೌಂಡ್ ಸಿಸ್ಟಂ, ಡಿಜೆ ಬಾಕ್ಸ್ಗಳು ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ಜಿಲ್ಲಾದ್ಯಂತ ನಿಷೇಧಿಸಲಾಗಿದೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 