ಕೊರೊನಾ ಸೋಂಕಿತ ಅಫ್ರಿದಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ ಗೌತಮ್ ಗಂಭೀರ್
ನವದೆಹಲಿ, ಜೂನ್ 14,ಕ್ರೀಡಾಂಗಣದ ಹೊರಗೆ ಮತ್ತು ಒಳಗೆ ಎಷ್ಟೇ ಜಿದ್ದಾಜಿದ್ದಿನ ವೈರಿಗಳಾದರೂ, ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಬಹುಬೇಗನೆ ಗುಣಮುಖರಾಗಲಿ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹಾರೈಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.ಕಾಶ್ಮೀರ ಗಡಿ ವಿಚಾರದಲ್ಲಿ ಆಗಾಗ ಮೂಗು ತೂರಿಸಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತೀಯ ಭಾವನೆಗಳನ್ನು ಕದಡುತ್ತಲೇ ಬಂದಿರುವ ಶಾಹಿದ್ ಅಫ್ರಿದಿ, ಶನಿವಾರವಷ್ಟೇ ತಾವು ಕೋವಿಡ್-19 ಸೋಂಕಿಗೆ ತುತ್ತಾಗಿರುವುದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದರು."ವೈರಸ್‌ಗೆ ಯಾರೊಬ್ಬರೂ ಕೂಡ ಸಿಲುಕಬಾರದು. ಶಾಹಿದ್ ಅಫ್ರಿದಿ ವಿರುದ್ಧ ರಾಜಕೀಯ ವಿಚಾರಗಳಲ್ಲಿ ವೈಮನಸ್ಸು ಇದೆ. ಆದರೆ ಅವರು ಬಹುಬೇಗನೆ ಚೇತರಿಸಲಿ ಎಂದು ಬಯಸುತ್ತೇನೆ. ಅಫ್ರಿದಿ ಅಷ್ಟೇ ಅಲ್ಲ ನನ್ನ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಬಹುಬೇಗ ಚೇತರಿಸಲಿ ಎಂಬುದು ನನ್ನ ಬಯಕೆ," ಎಂದು ಸುದ್ದಿ ವಾಹಿನಿಗೆ ಗಂಭೀರ್ ಹೇಳಿಕೆ ನೀಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 