ಬಿ.ಎ. ಪದವಿಯಲ್ಲಿ ಗೌತಮಿ ಬಡಿಗೇರಿಗೆ 6ನೇ ರ್ಯಾಂಕ್
Gautami Badigeri secures 6th rank in B.A. degree
ಬಳ್ಳಾರಿ (ಕೂಡ್ಲಿಗಿ), ಆ. 20: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ಪದವಿ ವಿದ್ಯಾರ್ಥಿನಿ ಗೌತಮಿ ಬಡಿಗೇರ ಅವರು ಶೇ.88.11ರಷ್ಟು ಅಂಕ ಗಳಿಸಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯಕ್ಕೆ ಸಂಯೋಜನೆ ಹೊಂದಿರುವ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ ಒಟ್ಟು 4,600 ಅಂಕಗಳಿಗೆ 4,053 ಅಂಕಗಳನ್ನು (ಶೇ.88.11) ಗಳಿಸುವ ಮೂಲಕ ಗೌತಮಿ ಬಡಿಗೇರ ಅವರು ಬಿ.ಎ. ವಿಭಾಗದಲ್ಲಿ ವಿಶ್ವವಿದ್ಯಾಲಯದ 6ನೇ ರ್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್, ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 