ಗೀತಾ, ಪೂರ್ಣಿಮಾ ಸಿಂದಗಿ ಅವರಿಗೆ ಚಿನ್ನದ ಪದಕ ಪ್ರದಾನ

Geeta, Poornima Sindagi awarded gold medals

ವಿಜಯಪುರ 10: ನಗರದ ಬಿ.ಎಲ್‌.ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದಿದ್ದಾರೆ.  

ಮಂಗಳವಾರ ಬೆಂಗಳೂರಿನಲ್ಲಿ ನಡೆದ ವಿವಿಯ 27ನೇ ಘಟಕೋತ್ಸವದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ಗೀತಾ ಮತ್ತು  ಪೂರ್ಣಿಮಾ ಸಿಂದಗಿ ಅವರಿಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಚಿನ್ನದ ಪದಕ ಪ್ರದಾನ ಮಾಡಿದರು.  

ವಿದ್ಯಾರ್ಥಿನಿಯರ ಈ ಸಾಧನೆಗೆ ಬಿ.ಎಲ್‌.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ, ಆಡಳಿತ ಮಂಡಳಿಯ ನಿರ್ದೇಶಕರು, ಕಾಲೇಜಿನ ಪ್ರಾಚಾರ್ಯರು ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.