ಜಮಖಂಡಿ

ನಾಳೆ ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟದ ಸರ್ವಸಾಮಾನ್ಯ ಸಭೆ

ನಾಳೆ ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟದ ಸರ್ವಸಾಮಾನ್ಯ ಸಭೆ

ಜಮಖಂಡಿ29: ಕರ್ನಾ ಟಕ ರಾಜ್ಯ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿವೃತ್ತ ಶಿಕ್ಷಕರ ಸಂಘಗಳ ಒಕ್ಕೂಟದ 2ನೇ ಸರ್ವಸಾಮಾನ್ಯ ಸಭೆ ಧಾರವಾಡದ ಜೆಎಸ್ಎಸ್ ಕಾಲೇಜಿನ ಸನ್ನಿಧಿ ಸಭಾಂಗಣದಲ್ಲಿ ಅ.1ರಂದು ಬೆಳಿಗ್ಗೆ 10-30 ಗಂಟೆಗೆ ಜರುಗಲಿದೆ ಎಂದು ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಎಚ್.ಕೆ. ಪಾಟೀಲ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ವಿಧಾನ ಪರಷತ್ ಸದಸ್ಯ ಎಸ್.ವಿ. ಸಂಕನೂರ, ಧಾರವಾಡ ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ.ಅಜೀತ ಪ್ರಸಾದ, ಧಾರವಾಡದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ.ಎಂ. ಚಂದ್ರ ಪೂಜಾರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಅಧ್ಯಕ್ಷತೆ ವಹಿಸುವರು.ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಕೆ.ಜಿ. ಲೋಕೇಶ, ಪ್ರಧಾನ ಕಾರ್ಯದರ್ಶಿ ಡಾ.ಆರ್. ರಾಮಚಂದ್ರಪ್ಪ, ಕೋಶಾಧ್ಯಕ್ಷ ಪ್ರೊ.ಎಸ್.ವಿ. ಶ್ರೀರಾಮ ರೆಡ್ಡಿ, ಉಪಾಧ್ಯಕ್ಷ ಡಾ.ಎಸ್.ಎಲ್. ಕಾಡದೇವರಮಠ, ಮಹಿಳಾ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಜಂಟಿ ಕಾರ್ಯದರ್ಶಿ ಪ್ರೊ.ದೇವರಾಜು, ಸರ್ವಸಾಮಾನ್ಯ ಸಭೆಯ ಸಂಘಟನಾ ಸಮಿತಿ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಸಂಘಟನಾ ಕಾರ್ಯದರ್ಶಿ ಡಾ.ಜಿ.ಜಿ. ನೆಹಲಾನಿ, ಖಜಾಂಚಿ ಪ್ರೊ.ಆರ್.ಎಸ್. ಮಿಟ್ಟಿಮನಿ ಭಾಗವಹಿಸಲಿದ್ದಾರೆ.75 ವರ್ಷ ಮತ್ತು ಮೇಲ್ಪಟ್ಟ ಒಕ್ಕೂಟದ ಆಜೀವ ಸದಸ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಕಾಲೇಜುಗಳ ಒಕ್ಕೂಟದ ಸದಸ್ಯರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟನೆಗೆ ತಿಳಿದ್ದಾರೆ. 


ಸುದ್ದಿ ಓದಿ