ಪ್ರತಿಯೊಬ್ಬರೂ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಿರಿ
ಹಗರಿಬೊಮ್ಮನಹಳ್ಳಿ 15: ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮಾಜಿ ಶಾಸಕ ಹಾಗೂ ಕೆಪಿಸಿಸಿ ರಾಜ್ಯ ವಕ್ತಾರ ಸಿರಾಜ್ ಶೇಖ್ ಕೋವಿಶಿಲ್ಡ್ ಲಸಿಕೆ ಪಡೆದರು. 60ವರ್ಷ ಮೇಲ್ಪಟ್ಟವರು ಹಾಗೂ ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿರುವ ಪ್ರತಿಯೊಬ್ಬರೂ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಬೇಕು. ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಶಂಕರ್ ನಾಯ್ಕ್, ಟಿಹೆಚ್‍ಒ ಶಿವರಾಜ್ ಹಾಗೂ ಸಿಬ್ಬಂದಿ ಇದ್ದರು.