ಕಾರವಾರ

ಕೊವ್ಯಾಕ್ಸಿನ್ ಲಸಿಕೆ ಪಡೆದು ಆರೋಗ್ಯ ರಕ್ಷಿಸಿಕೊಳ್ಳಿ: ಹೆಗಡೆ

ಕೊವ್ಯಾಕ್ಸಿನ್ ಲಸಿಕೆ ಪಡೆದು ಆರೋಗ್ಯ ರಕ್ಷಿಸಿಕೊಳ್ಳಿ: ಹೆಗಡೆ

ಬನವಾಸಿ 22: ಬನವಾಸಿ ಪಟ್ಟಣದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಸರ್ಕಾರ ನೀಡುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಿ ಎಂದು ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ ಮನವಿ ಮಾಡಿಕೊಂಡಿದ್ದಾರೆ.

ಈ ಲಸಿಕೆ ಕೋವಿಡ್ ವೈರಾಸ್‍ನಿಂದ ರಕ್ಷಿಸಿಕೊಳ್ಳಲು ಸಹಕಾರಿಯಾಗಿದ್ದು 60ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಪಾರ್ಶ್ವವಾಯು, ಮತ್ತಿತರ ಕೊರ್ಮಾರ್ಬಿಡಿಟಿಗಳಿಂದ ಬಳಲುತ್ತಿರುವ 45 ರಿಂದ 59ವರ್ಷದ ವ್ಯಕ್ತಿಗಳು ತಮ್ಮ ಆಧಾರಕಾರ್ಡ್‍ನೊಂದಿಗೆ ಬಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದುಕೊಳ್ಳಬಹುದು. ಮೆ.1ರಿಂದ 18ವರ್ಷ ಮೇಲ್ಪಟ್ಟವರಿಗೂ ಲಸಿಕೆ ಹಾಕಲಾಗುವುದು.  ಬನವಾಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನಪ್ರತಿನಿಧಿಗಳು, ಯುವಸಮೂಹವೂ ತಮ್ಮ ಅಕ್ಕಪಕ್ಕದವರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಮನವೊಲಿಸುವುದರ ಜೊತೆಗೆ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ, ಹೊರಗಡೆ ಬರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸುರಕ್ಷಿತ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯ ಇಲಾಖೆಗೆ ಸಹಕರಿಸುವಂತೆ ಮನವಿ ಮಾಡಿದರು.


ಸುದ್ದಿ ಓದಿ