ಯೋಜನೆಗಳನ್ನು ಸದ್ಬಳಕೆ ಪಡೆಯಿರಿ. ಜಿಲ್ಲಾ ನಿರ್ದೇಶಕ :ರೋಹಿತಾಕ್ಷ ಕರೆ
Get the best out of the projects. District Director: Rohitaksha Kale
ಬಳ್ಳಾರಿ 27: ನಗರದಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ, ಅವರು ಗೌರವದಿಂದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಸಂಸ್ಥೆ ನೀಡುತ್ತಿರುವ ಹಲವಾರು ಯೋಜನೆಗಳನ್ನು ಪ್ರತಿ ಅರ್ಹ ಕುಟುಂಬ ಸದುಪಯೋಗ ಪಡೆದು ಕೊಳ್ಳಬೇಕೆಂದು, ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕರಾದ ರೋಹಿತಾಕ್ಷ ಹೇಳಿದರು. ಶುಕ್ರವಾರ ಬಳ್ಳಾರಿ ತಾಲೂಕ ವ್ಯಾಪ್ತಿಯ ಮೊಕ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣಕ್ಕಾಗಿ ಭೂಮಿ ಪೂಜೆ ಸಲ್ಲಿಸಿ ನಂತರ ಮಾತನಾಡಿದರು.
ಸಮಾಜದಲ್ಲಿ ಪ್ರತಿಯೊಬ್ಬರು ಗೌರವದಿಂದ ಬದುಕಲು, ಬಡ ಕುಟುಂಬಗಳಿಗೆ ಆಶ್ರಯವಾಗಲು ತಮ್ಮ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುವದಾಗಿ, ಅದರಲ್ಲಿ ಸ್ವಂತ ಮನೆ ಇಲ್ಲದವರಿಗೆ ಆರ್ಥಿಕ ಸಹಾಯ ಮಾಡುತ್ತಿರುವುದಾಗಿ ತಿಳಿಸಿದರು. ಅದೇ ರೀತಿಯಾಗಿ ಇನ್ನೂ ಹಲವಾರು ಯೋಜನೆಗಳು ತಾವು ಜಾರಿಗೊಳಿಸುತ್ತಿರುವುದಾಗಿ, ಇವನ್ನು ತಿಳಿದುಕೊಂಡು ಪ್ರತಿ ಅರ್ಹ ಕುಟುಂಬ ಸದ್ಬಳಕೆ ಪಡೆಯಲು ಮುಂದಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆಯ ತಾಲೂಕ ಯೋಜನಾಧಿಕಾರಿ ಬಸವರಾಜ್, ಮೂಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಫಕೀರಮ್ಮ ಮತ್ತು ವೆಂಕಟೇಶ್ ಹಾಗೂ ಗ್ರಾಮ ಪಂಚಾಯತಿಯ ಸದಸ್ಯರಾದ ಕುಮಾರ್ ಗೌಡ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿಯದ ಆಶಾ, ಮುಖ ವಲಯದ ಮೇಲ್ವಿಚಾರಕ ಜಡೆ ಮೂರ್ತಿ, ಸೇವಾ ಪ್ರತಿನಿಧಿ ಗಂಗಾಧರ ಮತ್ತು ಚಾಮುಂಡಿ ಹಾಗೂ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಾತ್ಸಲ್ಯ ಮನೆ ಫಲಾನುಭವಿ ಶೇಖಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗಡೆಯವರಿಗೆ ಮತ್ತು ಅವರ ಧರ್ಮಪತ್ನಿಗೆ ಧನ್ಯವಾದಗಳು ತಿಳಿಸುತ್ತಿರುವದಾಗಿ ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 