ಜೂನ್ ನಲ್ಲಿ ಸಚಿವ ಸ್ಥಾನ ಸಿಗುತ್ತೆ: ಎಂ.ಟಿ.ಬಿ. ನಾಗರಾಜ್
ಬೆಂಗಳೂರು, ಫೆ : ಈಗ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ತಮಗೆ ಬೇಸರವಿಲ್ಲ. ಆದರೆ ಬರುವ ಜೂನ್ ನಲ್ಲಿ ಮಂತ್ರಿಯಾಗುವ ಯೋಗ ಬಂದೇ ಬರುತ್ತದೆ ಎಂದು ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂ.ಟಿ.ಬಿ. ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಜೂನ್‌ನಲ್ಲಿ ವಿಧಾನಪರಿಷತ್ತಿನ ಏಳು ಸ್ಥಾನಗಳು ತೆರವಾಗಲಿದ್ದು, ಈ ಸಂದರ್ಭದಲ್ಲಿ ತಾವು, ಆರ್,ಶಂಕರ್ ಹಾಗೂ ವಿಶ್ವನಾಥ್ ಅವರನ್ನು ಮೇಲ್ಮನೆ ಸದಸ್ಯರನ್ನಾಗಿ ಯಡಿಯೂರಪ್ಪ ಮಾಡಲಿದ್ದಾರೆ. ಬಳಿಕ ಮಂತ್ರಿಮಂಡಲ ವಿಸ್ತರಣೆ ಮಾಡಿ ತಮಗೆ ಮಂತ್ರಿ ಸ್ಥಾನ ನೀಡಲಿದ್ದಾರೆ ಎಂದರು.
ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದ್ದು, ತಮಗೆ ಸೂಕ್ತ ಭರವಸೆ ನೀಡಿದ್ದಾರೆ. ಯಡಿಯೂರಪ್ಪ ಕೊಟ್ಟ ಮಾತಿನಂತೆ ಚಾಚೂ ತಪ್ಪದೆ ನಡೆದುಕೊಳ್ಳುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲುಕಾರಣರಾದ ಎಲ್ಲ ೧೭ ಮಂದಿ ಒಗ್ಗಟ್ಟಾಗಿದ್ದೇವೆ, ಮುಂದಿನ ದಿನಗಳಲ್ಲಿ ಎಲ್ಲರಿಗೂಅಧಿಕಾರ ಸಿಗಲಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 