ಅಥಣಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಗೀರೀಶ ಬುಟಾಳಿ ಆಯ್ಕೆ
Girish Butali elected as Athani BJP Mandal President
ಅಥಣಿ 26 : .ಬಿಜೆಪಿ ಅಥಣಿ ಮಂಡಲದ ಅಧ್ಯಕ್ಷರನ್ನಾಗಿ ಗೀರೀಶ್ ಬುಟಾಳಿ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ ಗೀರೀಶ್ ಬುಟಾಳಿ ಇವರ ಕೈ ಗೆ ಬಿಜೆಪಿಯ ಕಮಲದ ಚಿಹ್ನೆಯ ಧ್ವಜ ಕೊಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಬಿಜೆಪಿ ಧುರೀಣ ಗೀರೀಶ ಬುಟಾಳಿ ಅಥಣಿ ಪುರಸಭೆಯ ಅಧ್ಯಕ್ಷರಾಗಿ ಒಂದು ಅವಧಿಗೆ ಕಾರ್ಯನಿರ್ವಹಿದ್ದರು. ಇವರ ಅಧಿಕಾರವಧಿಯಲ್ಲಿ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆಗಳು ಅಥಣಿಯಲ್ಲಿ ಅನುಷ್ಠಾನಗೊಂಡಿದ್ದವು. ಒಂದು ಬಾರಿ ಜೆಡಿಎಸ್ ಪಕ್ಷದಿಂದ ಅಥಣಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಕೂಡ ಮಾಡಿದ್ದರು. ಬದಲಾದ ರಾಜಕೀಯ ಸ್ಥಿತಿಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರೆ್ಡಯಾಗಿದ್ದ ಇವರು ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಇವರ ಸಂಘಟನಾ ಚತುರತೆ ಗಮನಿಸಿದ ಬಿಜೆಪಿ ನಾಯಕರು ಅಥಣಿ ಮಂಡಲಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಗೀರೀಶ ಬುಟಾಳಿ ಇವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಹಿರಿಯ ಮುಖಂಡರಾದ ಉಮೇಶರಾವ ಬಂಟೋಡಕರ, ಎಸ್.ಎ.ಮುದಕಣ್ಣವರ, ಪ್ರಭಾಕರ ಚವ್ಹಾಣ ಸೇರಿದಂತೆ ಅನೇಕರು ಗೀರೀಶ ಬುಟಾಳಿ ಇವರನ್ನು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಗೀರೀಶ ಬುಟಾಳಿ, ಅಥಣಿ ಮತಕ್ಷೇತ್ರದಲ್ಲಿ ಬಿಜೆಪಿಯನ್ನು ಅಧಿಕಾರ ತರುವ ನಿಟ್ಟಿನಲ್ಲಿ ಇಂದಿನಿಂದಲೇ ಕಾರ್ಯ ಪ್ರವೃತ್ತನಾಗುವೆ ಎಂದ ಅವರು ಮೊದಲಿನಂತೆಯೇ ನನಗೂ ಕೂಡ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು, ಧುರೀಣರು ಮಾರ್ಗದರ್ಶನ ಮತ್ತು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 