ಬಳ್ಳಾರಿ

ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಗೀರೀಶ್ ಅಧಿಕಾರ ಸ್ವೀಕಾರ

ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಗೀರೀಶ್ ಅಧಿಕಾರ ಸ್ವೀಕಾರ

ಲೋಕದರ್ಶನ ವರದಿ 

ಬಳ್ಳಾರಿ 08: ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸುಕೋ ಬ್ಯಾಂಕ್‌ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಗೀರೀಶ್ ಎಂ.ಆರ್‌. ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.  


ಕರ್ನಾಟಕ ಬ್ಯಾಂಕ್‌ನ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿದ್ದ ಎಂ.ಆರ್‌. ಗೀರೀಶ್ ಅವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಸುಕೋ ಬ್ಯಾಂಕ್‌ನ ಪ್ರಭಾರಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೆಂಕಟೇಶ್‌ರಾವ್ ಅವರಿಂದ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.  


ಈ ಸಂದರ್ಭದಲ್ಲಿ ಮಾತನಾಡಿದ ನೂತನ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್‌. ಗೀರೀಶ್, ಉತ್ತರ ಮತ್ತು ಮಧ್ಯ ಕರ್ನಾಟಕದ ಪ್ರತಿಷ್ಠಿತ ವಿಶ್ವಾಸಾರ್ಹ ಸಹಕಾರಿ ಬ್ಯಾಂಕ್ ಆಗಿರುವ ಸುಕೋ ಬ್ಯಾಂಕ್, ಸ್ವತಂತ್ರ ಐಎಫ್‌ಎಸ್‌ಸಿ ಸಂಖ್ಯೆಯನ್ನು ಹೊಂದಿದೆ. 28 ಶಾಖೆಗಳನ್ನು ಹೊಂದಿದೆ. 

ಕಾರಟಗಿಯ ಶರಣಬಸವೇಶ್ವರ ಸೌಹಾರ್ದ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತವನ್ನು ವೀಲೀನಕ್ಕೆ  ಭಾರತೀಯ ರಿಜರ​‍್ವ‌ಬ್ಯಾಂಕ್ ಅನುಮತಿ ನೀಡಿದೆ. ಈ ಮೂಲಕ ಸುಕೋ ಬ್ಯಾಂಕ್‌ನ ಒಟ್ಟು ಶಾಖೆಗಳ ಸಂಖ್ಯೆ 29ಆಗಲಿದೆ ಎಂದರು. ಬ್ಯಾಂಕ್‌ನ ಅಧ್ಯಕ್ಷ ಮೋಹಿತ್ ಮಸ್ಕಿ ಅವರು ಮಾತನಾಡಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ  

ಗೀರೀಶ್ ಅವರು, ಬ್ಯಾಂಕ್‌ನ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ ಎಂದರು. 


ಸುದ್ದಿ ಓದಿ