ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಿ:ಅಧ್ಯಕ್ಷ ಆಸಿಫ್
Give Appaji Nadagowda a ministerial berth: President Asif
ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಿ:ಅಧ್ಯಕ್ಷ ಆಸಿಫ್
ತಾಳಿಕೋಟಿ 09: ಜಿಲ್ಲೆ ಹಿರಿಯ ಮುತ್ಸದ್ದಿ ರಾಜಕಾರಣಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು 6 ಬಾರಿ ಶಾಸಕರಾಗಿ ಅಪಾರ ಅನುಭವ ಹೊಂದಿದವರಾಗಿದ್ದಾರೆ ಈ ಬಾರಿಯ ಸಂಪುಟ ಪುನರ್ ರಚನೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕಾಧ್ಯಕ್ಷ ಆಸೀಫ ಕೆಂಭಾವಿ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಭಾನುವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕೆ ಎಸ್ ಡಿ ಎಲ್ ನಿಗಮದ ಅಧ್ಯಕ್ಷರಾಗಿ ಅಪ್ಪಾಜಿ ನಾಡಗೌಡರು ನಷ್ಟದಲ್ಲಿದ್ದ ನಿಗಮವನ್ನು ಲಾಭದತ್ತ ಕೊಂಡೊಯ್ಯದಿದ್ದಾರೆ. ಅವರ ಅಪಾರ ಅನುಭವ ಹಾಗೂ ಪ್ರಬುದ್ಧತೆಯನ್ನು ಬಳಸಿಕೊಳ್ಳಲು ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶವನ್ನು ಕಲ್ಪಿಸಬೇಕು. ಈ ಮೊದಲು ಸಚಿವ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು, ಆದರೆ ಕೊನೆ ಗಳಿಗೆಯಲ್ಲಿ ಅವರನ್ನು ಕೈ ಬಿಡಲಾಯಿತು ಪದೇ ಪದೇ ಅವರಿಗೆ ಅನ್ಯಾಯವಾಗುತ್ತಿದೆ ಆದರೆ ಈ ಬಾರಿ ಹೀಗಾಗದಂತೆ ನೋಡಿಕೊಂಡು ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 