ಕಂಪ್ಲಿ

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ.ಉಪ್ಪಾರ ಸಮುದಾಯ ಆಗ್ರಹ

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ.ಉಪ್ಪಾರ ಸಮುದಾಯ ಆಗ್ರಹ

ಲೋಕದರ್ಶನ ವರದಿ

ಕಂಪ್ಲಿ 29 : ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಸಮರ​‍್ಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾದರೆ ಉಪ್ಪಾರ ಸಮಾಜದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು' ಎಂದು ತಾಲೂಕು ಭಗೀರಥ ಉಪ್ಪಾರ ಸಮಾಜ ಅಧ್ಯಕ್ಷ ಯು.ನಾಗರಾಜ ಆಗ್ರಹಿಸಿದರು.ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನ ಬಳಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ. ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು 30 ರಿಂದ 40 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದ್ದು, ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ'. ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆಂಬಲ ನೀಡುತ್ತಾ ಬಂದಿದ್ದು, ಇದೀಗ ಸಮಾಜದ ಆಶಯಕ್ಕೆ ಸ್ಪಂದಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು' ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಯು.ವೆಂಕಟೇಶ, ಪ್ರಧಾನ ಕಾರ್ಯದರ್ಶಿ ಕೆ.ಗೋವಿಂದಪ್ಪ ಇದ್ದರು. 


ಸುದ್ದಿ ಓದಿ