ಮನಗೂಳಿಗೆ ಮಂತ್ರಿಸ್ಥಾನ ನೀಡಿ: ಶ್ರೀಧರ ಅವಟಿ
Give Managula a ministerial position: Sridhar Avati
ಲೋಕದರ್ಶನ ವರದಿ
ಇಂಡಿ 16 : ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ್ ಮನಗೂಳಿ ಅವರಿಗೆ ಯುವಕರ ಕೋಟಾದಡಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ಎರಡನೇ ಸಚಿವ ಸಂಪುಟಪಟ್ಟಿಯಲ್ಲಿ ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅವರಿಗೆ ಸಚಿವ ಸ್ಥಾನ ಎಂದೂ ತಾಂಬಾ ಗ್ರಾಮದ ಕಾಂಗ್ರೆಸ್ ಯುವ ಮುಖಂಡರಾದ ಶ್ರೀಧರ ಅವಟಿ ಅವರು ಆಗ್ರಹಿಸಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರ ಅವಟಿ ಅವರು ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅವರು ಪ್ರಬಲವಾದ ಲಿಂಗಾಯತ ಪಂಚಮಸಾಲಿ ಸಮುದಾಯದಕ್ಕೆ ಸೇರಿದ ಯುವ ಶಾಸಕರಾಗಿದ್ದಾರೆ.
ಮತ್ತು ಈ ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದ ಸುಮಾರು 13 ಜನ ಪಂಚಮಸಾಲಿ ಸಮಾಜಕ್ಕೆ ಸೇರಿದ ಶಾಸಕರು ಇದ್ದಾರೆ. ಆದರೆ ಈ ಬಾರಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಇವರಿಗೆ ಪಂಚಮಸಾಲಿ ಸಮಾಜದ ಯಾವ ಶಾಸಕರಿಗೂ ಕೂಡಾ ಸಚಿವ ಸ್ಥಾನ ನೀಡದೆ ಇರುವುದು ಪಂಚಮಸಾಲಿ ಸಮಾಜದ ಜನರಿಗೆ ನೋವನ್ನುಂಟು ಮಾಡಿದೆ.ಈ ಬಾರಿ ನಮ್ಮ ಪಂಚಮಸಾಲಿ ಸಮುದಾಯದ ಕನಿಷ್ಠ ಮೂರು ರಿಂದ ನಾಲ್ಕು ಜನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು.
ಇಲ್ಲವಾದರೆ ರಾಜ್ಯದಲ್ಲಿ ಸುಮಾರು ಎಪ್ಪತ್ತು ಲಕ್ಷ ಜನಸಂಖ್ಯೆ ಇರುವ ಪಂಚಮಸಾಲಿಗಳು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಅಶೋಕ ಮನಗೂಳಿ ಅವರು ರೈತ ಜನಪರ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ ಹೌದು ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ.ಎಲ್ಲ ಸರ್ವ ಸಮಾಜದ ಒಳಿತಿಗಾಗಿ ಹಗಲಿರುಳು ದುಡಿಯುತ್ತಿದ್ದಾರೆ.
ಸಿಂದಗಿ ನಗರ ಆಲಮೇಲ ನಗರ ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲಿಯೂ ಕೂಡಾ ಅಶೋಕ ಮನಗೂಳಿ ಅವರು ಒಳ್ಳೆಯ ಕೆಲಸ ಮಾಡಿದರೆ. ಸಿಂದಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಿನ್ನೆಲೆಯಲ್ಲಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬರುವ ಎಲ್ಲಾ ಮತಬಾಂಧವರ ಕಳಕಳಿಯು ಆಗಿದೆ ಇದನ್ನು ಮನದಲ್ಲಿ ಅಶೋಕ ಮನಗೂಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಶ್ರೀಧರ ಅವಟಿ ಆಗ್ರಹಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 