ಸಲೀಂ ಅಹಮದ್ ಅವರಿಗೆ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಿ: ಮಕ್ಬುಲ್ ಭಾಷಾ ಎಚ್‌.

ಸಲೀಂ ಅಹಮದ್ ಅವರಿಗೆ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಿ: ಮಕ್ಬುಲ್ ಭಾಷಾ ಎಚ್‌. Give Salim Ahmed a worthy place in the cabinet: Maqbul Bahasa H.

ಲೋಕದರ್ಶನ ವರದಿ 

ಮಹಾಲಿಂಗಪುರ: ಕರ್ನಾಟಕ ರಾಜಕಾರಣದಲ್ಲಿ ದೀರ್ಘಕಾಲದಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವ, ಪ್ರಸ್ತುತ ವಿಧಾನ ಪರಿಷತ್ ಸದಸ್ಯ ಹಾಗೂ ಸರ್ಕಾರದ ಮುಖ್ಯ ಸಚೇತಕರಾಗಿರುವ ಸಲೀಂ ಅಹಮದ್ ಅವರಿಗೆ ಮುಂಬರುವ ಸಚಿವ ಸಂಪುಟ ಪುನಾರಚನೆಯಲ್ಲಿ ಪೂರ್ಣ ಪ್ರಮಾಣದ ಸಚಿವ ಸ್ಥಾನ ನೀಡಬೇಕೆಂದು ಬಾಗಲಕೋಟ್ ಜಿಲ್ಲಾ ಅಲ್ಪಸಂಖ್ಯಾತರ ಮಾಜಿ ಸಾಮಾಜಿಕ ಜಾಲತಾಣದ ಮುಖಂಡ ಮಕ್ಬುಲ್ ಭಾಷಾ ಎಚ್ ಮತ್ತು ದಾದ ಸನದಿಯವರು ತೀವ್ರವಾಗಿ ಒತ್ತಾಯಿಸಿದ್ದಾರೆ.  

ಸಲೀಂ ಅಹಮದ್ ಅವರು ವಿದ್ಯಾರ್ಥಿ ದೆಸೆಯಿಂದಲೇ ಮುಂಚೂಣಿ ನಾಯಕರಾಗಿ ಬೆಳೆದು ಬಂದವರು. ಅಖಿಲ ಭಾರತ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹಾಗೂ ನೆಹರೂ ಯುವ ಕೇಂದ್ರದ ಮಹಾನಿರ್ದೇಶಕರಾಗಿ (ರಾಷ್ಟ್ರೀಯ ಮಟ್ಟದಲ್ಲಿ) ಅವರು ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಸಂಘಟನಾತ್ಮಕವಾಗಿ ಸುದೀರ್ಘವಾಗಿ 45 ವರ್ಷಗಳ ಕಾಲ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. 

ಪ್ರಸ್ತುತ ಸರ್ಕಾರದ ಮುಖ್ಯ ಸಚೇತಕರಾಗಿ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿದ್ದರೂ, ಅವರ ಆಡಳಿತಾತ್ಮಕ ಅನುಭವ, ಕಾರ್ಯದಕ್ಷತೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಪ್ರಾತಿನಿಧ್ಯದ ದೃಷ್ಟಿಯಿಂದ ಅವರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಯೊಂದನ್ನು ನೀಡುವುದು ಅತ್ಯಂತ ಸೂಕ್ತವಾಗಿದೆ. ಪಕ್ಷದ ಹಿರಿಯ ನಾಯಕತ್ವ ಮತ್ತು ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕೆಂದು ಈ ಈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.